ಉಡುಪಿ: ರಾಜ್ಯಾದ್ಯಂತ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡುತ್ತೇವೆ. ಪರಿಸರಕ್ಕೆ ಹಾನಿಯಾಗದಂತೆ ವಿದ್ಯುತ್ ಉತ್ಪಾದಿಸುತ್ತೇವೆ. ರಾಜ್ಯದ ಎಲ್ಲಾ ಮನೆಗಳಿಗೆ ಬೆಳಕು ನೀಡುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮೈದಾನದಲ್ಲಿ ನಡೆದ 71ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಸಚಿವ ಸುನಿಲ್ ಕುಮಾರ್ ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂಧನ ಇಲಾಖೆಯ ಜವಾಬ್ದಾರಿ ಕೊಟ್ಟಿದ್ದಾರೆ. ಗ್ರಾಹಕರು ರೈತರು ಉದ್ಯಮಿಗಳಿಗೆ ಒಳಿತು ಬಯಸಬೇಕಿದೆ. ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ಕೊಡಲಾಗುವುದು. ಈ ಬಗ್ಗೆ ಶೀಘ್ರ ಕ್ರಿಯಾಯೋಜನೆ ರೂಪಿಸುತ್ತೇವೆ ಎಂದರು.
Advertisement
Advertisement
ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸ ನೀತಿ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸ ನೀತಿ ರಚಿಸಲಾಗುವುದು. ಹಿರಿಯರ ಸಮಿತಿ ರಚನೆ ಮಾಡುತ್ತೇನೆ. ಎಲ್ಲರ ಮಾರ್ಗದರ್ಶನ ಪಡೆದು ಹೊಸ ನೀತಿ ರೂಪಿಸುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ – ಓರ್ವ ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ
Advertisement
Advertisement
ಉಬರಡ್ಕ ಮಿತ್ತೂರು ಪಾರಂಪರಿಕ ಗ್ರಾಮ:
ಉಬರಡ್ಕ -ಮಿತ್ತೂರನ್ನು ಪಾರಂಪರಿಕ ಗ್ರಾಮ ಮಾಡುತ್ತೇವೆ. ಗ್ರಾಮದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸ್ವಾತಂತ್ರ್ಯ ಸಂಗ್ರಾಮ ನಡೆದಿತ್ತು. ಸ್ವಾತಂತ್ರ್ಯಕ್ಕಾಗಿ ಅಲ್ಲಿ ನೂರಾರು ಜನರ ಬಲಿದಾನವಾಗಿತ್ತು. ಉಬರಾಡ್ಕ ಮಿತ್ತುರಲ್ಲಿ ಹುತಾತ್ಮ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಪಾರಂಪರಿಕ ಗ್ರಾಮ ರಾಜ್ಯ, ದೇಶದಲ್ಲೇ ಗಮನ ಸೆಳೆಯುವ ಗ್ರಾಮ ಆಗುತ್ತದೆ. ಪ್ರವಾಸಿಗರು ಇಲ್ಲಿಗೆ ಬಂದು ಸ್ವಾತಂತ್ರ್ಯ ಸಂಗ್ರಾಮದ ಮಾಹಿತಿ ಪಡೆಯುವಂತೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಲಾಲ್‍ಬಾಗ್, ಕಬ್ಬನ್ ಪಾರ್ಕ್ ಮಾದರಿಯಲ್ಲಿ ಮತ್ತೊಂದು ಉದ್ಯಾನವನ: ತೋಟಗಾರಿಕೆ ಸಚಿವ ಮುನಿರತ್ನ