ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮತ್ತು ಜಾತ್ಯಾತೀತ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಇದೇ ಮೊದಲ ಬಾರಿಗೆ ಸಂಸತ್‍ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿದೆ. ಹೀಗಾಗಿ ದೇವೇಗೌಡರು ಶನಿವಾರ ರಾತ್ರಿಯೇ ದೆಹಲಿಗೆ ಹೋಗಿದ್ದರು. ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಸಮ್ಮುಖದಲ್ಲಿ ಎಚ್.ಡಿ.ದೇವೇಗೌಡ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
Advertisement
Advertisement
ರಾಜ್ಯಸಭೆ ಸದಸ್ಯರಾದ ಬಳಿಕ ಇದೇ ಮೊದಲ ಬಾರಿ ದೇವೇಗೌಡರು ಕಲಾಪಕ್ಕೆ ಹಾಜರಾಗಿದ್ದಾರೆ. ದೇವೇಗೌಡರು 24 ವರ್ಷಗಳ ಬಳಿಕ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದಾರೆ. ಈ ಹಿಂದೆ ಪ್ರಧಾನ ಮಂತ್ರಿಯಾಗಿದ್ದ ವೇಳೆ ಅವರು ಮೇಲ್ಮನೆಗೆ ಆಯ್ಕೆಯಾಗಿದ್ದರು.
Advertisement
ರಾಜ್ಯಸಭೆಯಲ್ಲಿ ತೆರವಾದ ನಾಲ್ಕು ಸ್ಥಾನಗಳಿಗಾಗಿ ಜೂನ್ 12ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ದೇವೇಗೌಡರು ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. 61 ಹೊಸ ಸದಸ್ಯರಲ್ಲಿ 45 ಮಂದಿ ಜುಲೈ 22 ರಂದು ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.
Advertisement
Delhi: Former Prime Minister & Janata Dal-Secular leader HD Deve Gowda takes oath as Rajya Sabha member pic.twitter.com/54BWzlgYrc
— ANI (@ANI) September 20, 2020
ಕೊರೊನಾ ಹಿನ್ನೆಲೆ ಹಿರಿಯ ನಾಗರಿಕರಿಗೆ ಪ್ರಯಾಣಿಸಲು ಕೋವಿಡ್ ಪ್ರೇರಿತ ನಿರ್ಬಂಧಗಳಿಂದಾಗಿ ಆಗ ದೇವೇಗೌರಡು ನವದೆಹಲಿಗೆ ಹೋಗಲು ಸಾಧ್ಯವಾಗಲಿಲ್ಲ. ಇದೀಗ ವೈದ್ಯರ ಸಲಹೆಯ ಮೇರೆಗೆ ದೇವೇಗೌಡರು ತಮ್ಮ ಪತ್ನಿ ಚೆನ್ನಮ್ಮ ಅವರೊಂದಿಗೆ ದೆಹಲಿಗೆ ಹೋಗಿದ್ದು, ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಶನಿವಾರ ಹಿಂದಿ ಹೇರಿಕೆಯ ಬಗ್ಗೆ ಸಂಸದೆ ಸುಮಲತಾ ಅಂಬರೀಷ್ ಸಂಸತ್‍ನಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಲೋಕಸಭೆ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದೆ ಸುಮಲತಾ, ಹಿಂದಿ ಹೇರಿಕೆಯಿಂದ ಪ್ರಾದೇಶಿಕ ಭಾಷೆಗಳಿಗೆ ಹಾನಿ ಉಂಟಾಗಲಿದೆ. ಹೀಗಾಗಿ ಹಿಂದಿ ಹೇರಿಕೆಯನ್ನು ಕನ್ನಡಿಗರಾದ ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಜನರ ಭಾವನೆಯೂ ಇದೆ ಆಗಿದೆ. ಕೇಂದ್ರ ಸರ್ಕಾರ, ತ್ರಿಭಾಷ ಸೂತ್ರದ ಜಾರಿ ವಿಚಾರದಲ್ಲಿ ಪುನರ್‍ವಿಮರ್ಷೆ ಮಾಡಿಕೊಳ್ಳಬೇಕು ಎಂದು ಸುಮಲತಾ ಅಂಬರೀಶ್ ಆಗ್ರಹಿಸಿದ್ದರು.
ನಾವು ಕನ್ನಡಿಗರೂ ಭಾರತೀಯರೆ. ಹಿಂದಿನೂ ಇಷ್ಟ, ಆದರೆ ಕನ್ನಡದ ಮೇಲೆ ಪ್ರೀತಿ ಜಾಸ್ತಿ. ಯಾವುದೇ ಕಾರಣಕ್ಕೂ ನಮ್ಮ ಭಾಷೆಯನ್ನು ನಾವು ಬಿಟ್ಟುಕೊಡುವುದಿಲ್ಲ. ಒಂದೇ ಸಂಪರ್ಕ ಭಾಷೆಯಿಂದ ಆಗುವ ತೊಂದರೆಯನ್ನು ಬ್ಯಾಂಕುಗಳಲ್ಲಿ ನೋಡುತ್ತಿದ್ದೇವೆ. ತ್ರಿಭಾಷಾ ಸೂತ್ರದ ತೊಂದರೆಗಳ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿದೆ.https://t.co/sDfp1G98go
— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) September 19, 2020