ರಾಯಚೂರು: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗೆ ವಿರೋಧಿಸಿ ರೈತ, ಕಾರ್ಮಿಕ ಸಂಘಟನೆಗಳಿಂದ ಕರೆ ನೀಡಲಾದ ಕರ್ನಾಟಕ ಬಂದ್‍ಗೆ ರಾಯಚೂರಿನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಅಂಗಡಿ ಮುಗ್ಗಟ್ಟು, ತರಕಾರಿ ಮಾರಾಟ, ಹೋಟೆಲ್ ವ್ಯಾಪಾರ, ಸಾರಿಗೆ ಬಸ್ ಸಂಚಾರ, ಎಂಪಿಎಂಸಿ ಎಲ್ಲವೂ ಸ್ಥಬ್ಧವಾಗಿತ್ತು. ರೈತ ಹೋರಾಟಕ್ಕೆ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಸಾಥ್ ನೀಡಿದರು.
Advertisement
ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಯ್ದೆ ಹಿಂಪಡೆಯಲು ಆಗ್ರಹಿಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆ ಕಾರ್ಯಕರ್ತರು, ಕಾಂಗ್ರೆಸ್, ಜೆಡಿ ಎಸ್ ಮುಖಂಡರು ಭಾಗವಹಿಸಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.
Advertisement
Advertisement
ರಾಯಚೂರು ನಗರ ಮಾತ್ರವಲ್ಲದೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರದಲ್ಲೂ ಬಂದ್ ಜೋರಾಗಿತ್ತು. ಪ್ರತಿಭಟನಾ ಮೆರವಣಿಗೆ ಹಾಗೂ ನಿರಂತರ ಹೋರಾಟಗಳು ನಡೆದವು. ಕೇಂದ್ರ ಸರ್ಕಾರ ರೈತನಿಗೆ ಅನ್ನದಾತ ಅಂತ ಹೇಳುತ್ತಲೇ ಬೆನ್ನಿಗೆ ಚೂರಿ ಹಾಕುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯಾದ್ಯಂತ ಬಂದ್ ಯಶಸ್ವಿಯಾಗಿದ್ದು ಎಲ್ಲೂ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲಾಯಿತು.