ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರು ಪ್ರಶ್ನೆ

Public TV
2 Min Read
Siddu

– ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು
– ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಖರ್ಚು ವೆಚ್ಚದ ಲೆಕ್ಕದ ಬಗ್ಗೆ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನು ಕೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರಕ್ಕೆ 6 ಪ್ರಶ್ನೆಗಳನ್ನ ಕೇಳಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದು, “ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್‍ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ. ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೋ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು ವಿನಂತಿ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ #LekkaKodi ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

Coronaviru

ಸಿದ್ದರಾಮಯ್ಯ ಕೇಳಿರುವ ಆರುವ ಪ್ರಶ್ನೆಗಳು:
1. ಕೊರೊನಾ ಸೋಂಕು ಬಂದಾಗಿನಿಂದ ಇದುವರೆಗೆ ರಾಜ್ಯ ಸರ್ಕಾರ ಖರ್ಚು ಮಾಡಿದ ಹಣ ಎಷ್ಟು? ಕೇಂದ್ರ ಸರ್ಕಾರ ಎಷ್ಟು ನೀಡಿದೆ?
2. ಯಾವ ಯಾವ ಇಲಾಖೆ ಯಾವ ಬಾಬತ್ತಿಗೆ ಎಷ್ಟು ಹಣ ಖರ್ಚು ಮಾಡಿವೆ?
3. ಪಿಪಿಇ ಕಿಟ್, ಟೆಸ್ಟ್ ಕಿಟ್, ಗ್ಲೌಸ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ಕಿಯೋಸ್ಕ್ ಮುಂದಾದವುಗಳಿಗೆ ಮಾರುಕಟ್ಟೆ ದರ ಎಷ್ಟು? ನೀವು ಪ್ರತಿಯೊಂದನ್ನ ಯಾವ ದರಕ್ಕೆ ಖರೀದಿಸಿದ್ದೀರಿ? ಯಾವ ಕಂಪನಿಯಿಂದ ಖರೀಸಿದ್ದೀರಿ?
4. ಈವರೆಗೆ ಎಷ್ಟು ಫುಡ್ ಕಿಟ್, ಎಷ್ಟು ಫುಡ್ ಪ್ಯಾಕೆಟ್ ಕೊಟ್ಟಿದ್ದೀರಿ? ಯಾರಿಗೆ ಕೊಟ್ಟಿದ್ದೀರಿ? ಪ್ರತಿಯೊಂದಕ್ಕೆ ಎಷ್ಟು ಹಣ ಖರ್ಚು ಮಾಡಿದ್ದೀರಿ? ತಾಲ್ಲೂಕು ವಾರು, ವಾರ್ಡ್ ವಾರು ಲೆಕ್ಕ ಕೊಡಿ?

CM BSY 2
5. ವಲಸೆ ಕಾರ್ಮಿಕರಿಗೆ ಪ್ರಯಾಣದ ಸಂದರ್ಭದಲ್ಲಿ ಎಷ್ಟು ಫುಡ್ ಕಿಟ್ ಕೊಟ್ಟಿದ್ದೀರಿ? ಏನೇನು ಕೊಟ್ಟಿದ್ದೀರಿ? ಪ್ರತಿ ಕಿಟ್‍ಗೆ ಖರ್ಚು ಮಾಡಿದ ಹಣ ಎಷ್ಟು?
ಸಂಕಷ್ಟದಲ್ಲಿರುವ ಜನರಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಘೋಷಿಸಿದ ಪ್ಯಾಕೇಜ್‍ಗಳು ಯಾವುವು? ಇದುವರೆಗೆ ಯಾವ ಯಾವ ವೃತ್ತಿಯವರಿಗೆ, ಯಾವ ಯಾವ ಸಮುದಾಯಕ್ಕೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ?
6. ಕೊರೊನಾ ಸಂತಸ್ತರಗೆ ಆರೈಕೆಗೆ ಎಷ್ಟು ಹಣ ಖರ್ಚು ಮಾಡಿದ್ದೀರಿ? ಈ ಎಲ್ಲದರ ಸಂಪೂರ್ಣ ಲೆಕ್ಕ ಕೊಡಿ

ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು. ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ ಎಂದು ಸಿದ್ದರಾಮಯ್ಯ ಕೊನೆಯಲ್ಲಿ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *