ಬೆಂಗಳೂರು: ಸಚಿವ ಸುಧಾಕರ್ ರಾತ್ರೋರಾತ್ರಿ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದು, ಆಸ್ಪತ್ರೆಗಳ ಅವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆ ಅವ್ಯವಸ್ಥೆ ಕುರಿತು ದೂರು ಹೆಚ್ಚಾದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಸುಧಾಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸುಧಾಕರ್, ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಡಿ ಗ್ರೂಪ್ ನೌಕರರು ಕೂಡ ಕಡಿಮೆ ಜನ ಇದ್ದಾರೆ. ಇದರ ಬಗ್ಗೆ ಕ್ರಮ ತೆಗೆದು ಕೊಳ್ಳಬೇಕಾಗಿದೆ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಕಡಿಮೆ ಇರುವುದು ಗಮನಕ್ಕೆ ಬಂದಿದೆ. ಕೆಸಿ ಜನರಲ್‍ನಲ್ಲಿ ಇರುವುದು 6 ವೆಂಟಿಲೇಟರ್‌ಗಳು ಮಾತ್ರ ಎಂದು ತಿಳಿಸಿದರು.
Advertisement
Advertisement
ಕೆಸಿ ಜನರಲ್ ಆಸ್ಪತ್ರೆಯಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ವಿಚಾರ ಮಾಧ್ಯಮಗಳ ಮೂಲಕ ನನಗೆ ತಿಳಿಯಿತು. ಆಸ್ಪತ್ರೆಗೆ ಭೇಟಿ ಮಾಡಿ ಸೊಂಕಿತರ ಜೊತೆ ಮಾತನಾಡಿದೆ. ಅಲ್ಲದೇ ಚಿಕಿತ್ಸೆ, ಸ್ವಚ್ಛತೆ, ಊಟ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.
Advertisement
ಕೆಸಿ.ಜನರಲ್ ಆಸ್ಪತ್ರೆಯ ನಂತ್ರ ವಿಕ್ಟೋರಿಯಾ ಸೇರಿದಂತೆ ಇನ್ನೂ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.