Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್ ವ್ಯವಸ್ಥೆ: ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್ ವ್ಯವಸ್ಥೆ: ಡಿಸಿಎಂ

Corona

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್ ವ್ಯವಸ್ಥೆ: ಡಿಸಿಎಂ

Public TV
Last updated: May 18, 2021 11:30 pm
Public TV
Share
3 Min Read
rmg dcm
SHARE

– ಆಕ್ಸಿಜನ್, ರೆಮ್‍ಡಿಸಿವರ್ ಕೊರತೆ ಇಲ್ಲ

ರಾಮನಗರ: ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ಮೊದಲ ಹಂತದಲ್ಲಿ 150 ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ನಾಳೆಯಿಂದಲೇ ಈ ಬೆಡ್ ಗಳ ಬಳಕೆಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗ 150 ಹಾಸಿಗೆ ವ್ಯವಸ್ಥೆ ಮಾಡಲಾಗಿದ್ದು, ಎರಡನೇ ಹಂತದಲ್ಲಿ, ಅಂದರೆ 15 ದಿನಗಳಲ್ಲಿ ಇನ್ನೂ 150 ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು. ಅಲ್ಲಿಗೆ ಒಟ್ಟು 300 ಆಕ್ಸಿಜನ್ ಬೆಡ್‍ಗಳಾಗುತ್ತವೆ ಎಂದರು.

corona virus 3

ಈಗಾಗಲೇ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ತಡೆಗೆ ಎಲ್ಲ ಕ್ರಮ ವಹಿಸಲಾಗಿದೆ. ಎರಡನೇ ಅಲೆ ಹಾಗೂ ಸಂಭವನೀಯ ಮೂರನೇ ಅಲೆ ಬಂದರೂ ಸಮಸ್ಯೆಯಾಗದಂತೆ ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ಆಕ್ಸಿಜನ್ ಬೆಡ್‍ಗಳನ್ನು ಹಾಕಲಾಗುತ್ತಿದೆ. ಕಂದಾಯ ಭವನದಲ್ಲಿ ಈಗ 35 ಆಕ್ಸಿಜನ್ ಬೆಡ್ ಇದ್ದು, ಅಲ್ಲಿ ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಲು ಉದ್ದೇಶಿಸಲಾಗಿದೆ. ಯಾವುದೇ ತುರ್ತು ಸಂದರ್ಭ ಎದುರಾದರೂ ಜಿಲ್ಲಾ ಕೇಂದ್ರದಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಹೋಮ್ ಐಸೋಲೇಷನ್ ಇಲ್ಲ
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಇನ್ನು ಮುಂದೆ ಕೋವಿಡ್ ಸೋಂಕಿತರನ್ನು ಮನೆಯಲ್ಲಿ ಕ್ವಾರಂಟೈನ್ ಮಾಡುವುದಿಲ್ಲ. ಸೋಂಕು ಪತ್ತೆಯಾದ ತಕ್ಷಣ ಅವರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಶಿಫ್ಟ್ ಮಾಡಿ ಆರೈಕೆ ಮಾಡಲಾಗುವುದು. ಅಲ್ಲಿ ವೈದ್ಯರು, ನರ್ಸ್‍ಗಳು ಹಾಗೂ ಪ್ಯಾರಾ ಮೆಡಿಕಲ್ ಸಿಬ್ಬಂದಿ ಇರುತ್ತಾರೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

corona virus 1

ಜಿಲ್ಲಾ ಕೇಂದ್ರದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಈಗಾಗಲೇ 6.8 ಟನ್ ಸಾಮಥ್ರ್ಯದ ಆಕ್ಸಿಜನ್ ಘಟಕ ಮಂಜೂರಾಗಿದೆ. ಸದ್ಯಕ್ಕೆ 3.5 ಕೆ.ಎಲ್‍ನಷ್ಟು ಆಮ್ಲಜನಕ ಬಳಕೆಯಾಗುತ್ತಿದೆ. ಇದರ ಜೊತೆಗೆ ಆಮ್ಲಜನಕ ಸಾಂದ್ರಕಗಳು, ಹೆಚ್ಚುವರಿ ಸಿಲಿಂಡರ್‍ಗಳೂ ನಮ್ಮಲ್ಲಿವೆ. ಹೀಗಾಗಿ ಎಲ್ಲೂ ಕೊರತೆ ಎಂಬುದಿಲ್ಲ ಎಂದರು ಅವರು.

ರಾಜ್ಯದಲ್ಲಿ ಒಟ್ಟು 60,000 ಆಕ್ಸಿಜನ್ ಬೆಡ್‍ಗಳಿದ್ದು, ಅದರಲ್ಲಿ ಅರ್ಧದಷ್ಟು ಬೆಡ್‍ಗಳು ಬೆಂಗಳೂರು ನಗರದಲ್ಲೇ ಇವೆ. ಇನ್ನೂ ಎಲ್ಲ ತಾಲೂಕು, ಜಿಲ್ಲಾ ಆಸ್ಪತ್ರೆ ಸೇರಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ರಾಮನಗರ ಜಿಲ್ಲೆಯಲ್ಲೂ ಯಾವುದೇ ಸಮಸ್ಯೆ ಇಲ್ಲ. ಅದೇ ರೀತಿ ರೆಮ್‍ಡಿಸಿವರ್ ಸೇರಿ ಯಾವ ಔಷಧದ ಕೊರತೆಯೂ ಇಲ್ಲ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

corona 2 1

ಪಿಎಚ್ ಸಿಗಳಿಗೆ ಭೇಟಿ
ರಾಮನಗರದ ಕಂದಾಯ ಭವನದಲ್ಲಿನ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಡಿಸಿಎಂ ಅವರು ಅಲ್ಲಿನ ಚಿಕಿತ್ಸೆ ಬಗ್ಗೆ ಸಿಬ್ಬಂದಿ ಜೊತೆ ಮಾತನಾಡಿ ಚಿಕಿತ್ಸಾ ವ್ಯವಸ್ಥೆ, ಔಷಧಿ ಇತ್ಯಾದಿ ಬಗ್ಗೆ ಮಾಹಿತಿ ಪಡೆದರು. ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಲಭ್ಯತೆ ಬಗ್ಗೆಯೂ ಮಾಹಿತಿ ಪಡೆದರು. ಬಳಿಕ ರಾಮನಗರ ತಾಲೂಕಿನ ಕಣ್ವ ಪ್ರಾಥಮಿಕ ಆರೋಗ್ಯ ಹಾಗೂ ಸುಗ್ಗನಹಳ್ಳಿಯಲ್ಲಿ ಇರುವ ಆಯುಷ್ ತರಬೇತಿ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಸುಗ್ಗನಹಳ್ಳಿಯಲ್ಲಿ ಕೋವಿಡ್ ಸೋಂಕಿತರಿದ್ದು, ಅವರು ಚಿಕಿತ್ಸೆ ಬಗ್ಗೆ ಸ್ಥಳೀಯ ವೈದ್ಯರಿಂದ ಮಾಹಿತಿ ಪಡೆದರು. ರೋಗಿಗಳ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಜತೆಯೂ ಮಾತನಾಡಿದರು.

corona

ಸುಗ್ಗನಹಳ್ಳಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರ ಜತೆಗೂ ಮಾತನಾಡಿದ ಡಿಸಿಎಂ, ಊಟ- ಉಪಚಾರದ ಬಗ್ಗೆ ವಿಚಾರಿಸಿದರು. ಎಲ್ಲರೂ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಸಿಇಒ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಉಪ ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಡಿಎಚ್‍ಒ ಡಾ.ನಿರಂಜನ್ ಹಾಗೂ ಇತರರು ಇದ್ದರು.

TAGGED:Corona VirusDCM Ashwath NarayanhospitalPublic TVramanagaraಆಸ್ಪತ್ರೆಕೊರೊನಾ ವೈರಸ್ಡಿಸಿಎಂ ಅಶ್ವಥ್ ನಾರಾಯಣ್ಪಬ್ಲಿಕ್ ಟಿವಿರಾಮನಗರ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Yatnal
Latest

ಭಾರತದ ಗಾಳಿ ಸೇವಿಸಿ, ಯಾವುದೋ ದೇಶದ ಅಧ್ಯಕ್ಷ ಸತ್ತರೆ ಇಲ್ಲಿ ಅಳುವುದು ಯಾಕೆ?: ಯತ್ನಾಳ್‌

Public TV
By Public TV
24 minutes ago
US F 15 Jets Shot Down
Latest

ಕುವೈತ್‌ ಎಡವಟ್ಟಿಗೆ ಅಮೆರಿಕದ 3 F-15 ವಿಮಾನ ಪತನ

Public TV
By Public TV
56 minutes ago
Siddaramaiah DK Shivakumar Narendra Modi
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ

Public TV
By Public TV
1 hour ago
us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
2 hours ago
Benjamin Netanyahu
Latest

ನೆತನ್ಯಾಹು ಕಚೇರಿ, ಇಸ್ರೇಲಿ ವಾಯುಪಡೆಯ ಕಮಾಂಡರ್ ಮೇಲೆ ಕ್ಷಿಪಣಿ ದಾಳಿ

Public TV
By Public TV
2 hours ago
Male Mahadeshwar
Chamarajanagar

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣದ ಎಫೆಕ್ಟ್: ಚಂದ್ರಗ್ರಹಣವಿದ್ದರೂ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?