ಬೆಂಗಳೂರು: ರಾಮನ ಅಸ್ತಿತ್ವ ಪ್ರಶ್ನೆ ಮಾಡಿದ ಕಾಂಗ್ರೆಸ್ಸಿಗರೇ, ಮೊದಲು ನಿಮ್ಮ ಅಸ್ತಿತ್ವ ಉಳಿಸಿಕೊಳ್ಳಿ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಕೈ ನಾಯಕರನ್ನು ಕಾಲೆಳೆದಿದ್ದಾರೆ.
ಟ್ವೀಟ್ ಮಾಡಿದ ರವಿಯವರು, ರಾಮ ಮಂದಿರ ಭೂಮಿ ಪೂಜೆಯ ನೇರ ಪ್ರಸಾರ ನೋಡಿದವರು 16 ಕೋಟಿ ಜನ. ಅಂದರೆ ಕಾಂಗ್ರೆಸ್ ಪಕ್ಷ 2019 ರಲ್ಲಿ ಪಡೆದ ಮತಗಳಿಗಿಂತ ಶೇ.6ರಷ್ಟು ಹೆಚ್ಚು ಎಂದು ಬರೆದುಕೊಂಡಿದ್ದಾರೆ.
Advertisement
ರಾಮ ಮಂದಿರ ಭೂಮಿ ಪೂಜೆಯ ನೇರ ಪ್ರಸಾರ ನೋಡಿದವರು 16 ಕೋಟಿ ಜನ.
ಅಂದರೆ ಕಾಂಗ್ರೆಸ್ ಪಕ್ಷ 2019 ರಲ್ಲಿ ಪಡೆದ ಮತಗಳಿಗಿಂತ 6% ಹೆಚ್ಚು.
ರಾಮನ ಅಸ್ತಿತ್ವ ಪ್ರಶ್ನೆ ಮಾಡಿದ ಕಾಂಗ್ರೆಸ್ಸಿಗರೇ, ಮೊದಲು ನಿಮ್ಮ ಅಸ್ತಿತ್ವ ಉಳಿಸಿಕೊಳ್ಳಿ.
— C T Ravi ???????? ಸಿ ಟಿ ರವಿ (@CTRavi_BJP) August 8, 2020
Advertisement
ಕಳೆದ ವಾರ ಉಡುಪಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಮ ಮಂದಿರ ನಿರ್ಮಾಣವಾದರೆ ಕೊರೊನಾ ದೂರವಾಗಲ್ಲ. ಬಿಜೆಪಿಯವರು ಅವೈಜ್ಞಾನಿಕವಾಗಿ ಮಾತನಾಡುವುದನ್ನು ಬಿಡಬೇಕು ಎಂದು ಹರಿಹಾಯ್ದಿದ್ದರು. ಇದನ್ನೂ ಓದಿ: ಸಿಎಂ ಆಗಿ ತಾರತಮ್ಯ ಮಾಡಲ್ಲ, ಹಿಂದೂವಾಗಿ ಮಸೀದಿ ಕಾರ್ಯಕ್ರಮಕ್ಕೆ ಹೋಗಲ್ಲ – ಯೋಗಿ ಆದಿತ್ಯನಾಥ್
Advertisement
ರಾಮ ಮಂದಿರದ ಉದ್ದೇಶದ ದುರುಪಯೋಗ ಬೇಡ. ರಾಮ ಮಂದಿರ ನಿರ್ಮಾಣವನ್ನು ಸ್ವಾಗತಿಸುತ್ತೇವೆ. ಭವ್ಯವಾದ ರಾಮ ಮಂದಿರ ನಿರ್ಮಾಣ ಆಗಲಿ. ಮಂದಿರಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಉದ್ದೇಶ ದುರುಪಯೋಗ ಆಗುವುದು ಬೇಡ ಎಂದು ಟಾಂಗ್ ನೀಡಿದ್ದರು.
Advertisement
ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಸ್ವತಃ ಸರ್ಕಾರದ ಆರು ಮಂದಿ ಕ್ಯಾಬಿನೆಟ್ ಸಚಿವರು ಸೋಂಕಿಗೆ ಒಳಗಾಗಿದ್ದಾರೆ. ಒಬ್ಬರು ಸಾವನ್ನಪ್ಪಿರುವ ಮಾಹಿತಿ ಇದೆ. ಅಲ್ಲದೆ ಸ್ವಾಮೀಜಿಯೊಬ್ಬರು ಸಹ ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಈ ಸಮಯದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಅಡಿಗಲ್ಲು ಕಾರ್ಯಕ್ರಮ ಬೇಕಿತ್ತಾ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಚಿಕ್ಕಬಳ್ಳಾಪುರದಲ್ಲಿ ಪ್ರಶ್ನಿಸಿದ್ದರು.
ರಾಮ ಮಂದಿರದ ಶಿಲಾನ್ಯಾಸದ ಹಿನ್ನೆಲೆ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿ, ಶ್ರೀರಾಮ ಸರಳತೆ, ಸಾಹಸ, ಸಂಯಮ, ತ್ಯಾಗ, ವಚನಬದ್ಧತೆ, ದೀನಬಂಧುವಾಗಿದ್ದಾನೆ. ರಾಮ ಎಲ್ಲೆಲ್ಲೂ ಇದ್ದಾನೆ, ಎಲ್ಲರೊಂದಿಗೂ ಇದ್ದಾನೆ. ಜೈಶ್ರೀರಾಮ್ ಎಂದು ಹೇಳಿದ್ದರು.
ರಾಮ ಸೇತು ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದಾಗ 2007ರಲ್ಲಿ ರಾಮನ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಯಾವುದೇ ಐತಿಹಾಸಿಕ ದಾಖಲೆಗಳಿಲ್ಲ ಎಂದು ಯುಪಿಎ ಸರ್ಕಾರ ಅಫಿಡವಿತ್ ಸಲ್ಲಿಸಿತ್ತು. ವಾಲ್ಮೀಕಿ ರಾಮಾಯಣ ಮತ್ತು ರಾಮಚರಿತ ಮಾನಸ ಭಾರತದ ಪುರಾತನ ಸಾಹಿತ್ಯವಾಗಿದೆ. ಆದರೆ ಇವುಗಳನ್ನು ಇತಿಹಾಸದ ಆಕಾರ ಗ್ರಂಥ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಫಿಡವಿತ್‌ನಲ್ಲಿ ಉಲ್ಲೇಖಿಸಿತ್ತು.