ಗ್ವಾಲಿಯರ್: ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾರ್ಯಗಳು ಪ್ರಾರಂಭವಾಗುವುದರೊಂದಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಅಂತ್ಯ ಪ್ರಾರಂಭವಾಗಲಿದೆ ಎಂದು ಮಧ್ಯಪ್ರದೇಶ ವಿಧಾನಸಭೆ ತಾತ್ಕಾಲಿಕ ಸ್ಪೀಕರ್, ಬಿಜೆಪಿ ನಾಯಕ ರಾಮೇಶ್ವರ್ ಶರ್ಮಾ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ಭೂಮಿ ಪೂಜೆ ಆಗಸ್ಟ್ 5 ರಂದು ನಡೆಯಲಿದ್ದು, ಭಗವಾನ್ ರಾಮ ಮಾನವಕುಲದ ಕಲ್ಯಾಣಕ್ಕಾಗಿ ಮತ್ತು ಆ ಸಮಯದಲ್ಲಿ ರಾಕ್ಷಸರನ್ನು ಕೊಲ್ಲಲು ಪುನರ್ ಜನ್ಮ ಪಡೆದಿದ್ದರು. ರಾಮಮಂದಿರ ನಿರ್ಮಾಣ ಪ್ರಾರಂಭವಾದ ಕೂಡಲೇ ಕೋವಿಡ್-19 ಸೋಂಕಿನ ನಾಶವೂ ಪ್ರಾರಂಭವಾಗುತ್ತದೆ ಎಂದು ಶರ್ಮಾ ತಿಳಿಸಿದ್ದಾರೆ.
Advertisement
Advertisement
ಭಾರತ ಮಾತ್ರವಲ್ಲ ಇಡೀ ಪ್ರಪಂಚ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದೆ. ನಾವು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದಷ್ಟೇ ಅಲ್ಲ, ನಮ್ಮ ಪವಿತ್ರ ವ್ಯಕ್ತಿಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ಸುಪ್ರೀಂ ಕೋರ್ಟ್ ಕೂಡ ರಾಮಮಂದಿರ ನಿರ್ಮಿಸಲು ಹೇಳಿದೆ ಎಂದಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5 ರಂದು ರಾಮಮಂದಿರ ಶಿಲಾನ್ಯಾಸ ಕ್ರಮ ನಡೆಸಲಿದ್ದಾರೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಹೇಳಿದ್ದಾರೆ. ಅಲ್ಲದೇ ಈ ಕಾರ್ಯಕ್ರಮವನ್ನು 200ಕ್ಕೂ ಹೆಚ್ಚು ಜನರಿಲ್ಲದೆ ಸಾಮಾಜಿಕ ಅಂತರ ಪಾಲನೆ ಮಾಡಿಕೊಂಡು ಸಮಾರಂಭದಲ್ಲಿ ಭಾಗವಹಿಸಲಾಗುವುದು ಎಂದಿದ್ದಾರೆ.