ಮಂಗಳೂರು: ಅಯೋಧ್ಯೆಯಲ್ಲಿ ಇಂದು ಶ್ರೀರಾಮಚಂದ್ರನ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರೆವೇರಿಸಿದ್ದಾರೆ. ಹಾಗೆಯೇ ರಾಮಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಶಾಸಕರ ಜೊತೆಗೆ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿಯವರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ರಾಮಮಂದಿರದ ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ನಡೆದು ಆದಷ್ಟು ಬೇಗ ದೇಶದ ರಾಮಭಕ್ತರಿಗೆ ಅಯೋಧ್ಯೆಯಲ್ಲಿ ರಾಮನ ದರ್ಶನ ಪಡೆಯುವಂತಾಗಲಿ ಎಂದು ಪ್ರಾರ್ಥಿಸಲಾಯಿತು.
- Advertisement
- Advertisement
ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ವೆಂಕಟೇಶ್ ನಾವಡ, ತಾ.ಪಂ ಸದಸ್ಯ ಯಶವಂತ ಪೊಳಲಿ, ಯುವ ಮೋರ್ಚಾದ ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು, ಅಶ್ವಥ್, ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ, ಲೋಕೇಶ್ ಭರಣಿ, ನಂದರಾಮ್ ರೈ, ಸುಕೇಶ್ ಚೌಟ, ವಾಮನ ಆಚಾರ್ಯ ಉಪಸ್ಥಿತರಿದ್ದರು.