Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮ ಮಂದಿರ ಶಿಲಾನ್ಯಾಸದ ದಿನ ಉಗ್ರರ ದಾಳಿ ಸಾಧ್ಯತೆ- ಗುಪ್ತಚರ ದಳ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಮ ಮಂದಿರ ಶಿಲಾನ್ಯಾಸದ ದಿನ ಉಗ್ರರ ದಾಳಿ ಸಾಧ್ಯತೆ- ಗುಪ್ತಚರ ದಳ ಎಚ್ಚರಿಕೆ

Latest

ರಾಮ ಮಂದಿರ ಶಿಲಾನ್ಯಾಸದ ದಿನ ಉಗ್ರರ ದಾಳಿ ಸಾಧ್ಯತೆ- ಗುಪ್ತಚರ ದಳ ಎಚ್ಚರಿಕೆ

Public TV
Last updated: July 30, 2020 9:24 pm
Public TV
Share
2 Min Read
Rammandir
SHARE

– ಜಮ್ಮು ಕಾಶ್ಮೀರ, ಅಯೋಧ್ಯೆಯಲ್ಲಿ ದಾಳಿಗೆ ಪ್ಲಾನ್
– 370ನೇ ವಿಧಿ ರದ್ದತಿಗೆ ವರ್ಷ ತುಂಬುವ ಹಿನ್ನೆಲೆ ದಾಳಿಗೆ ಸಂಚು

ನವದೆಹಲಿ: ಜಮ್ಮು ಕಾಶ್ಮೀರ ಹಾಗೂ ಅಯೋಧ್ಯೆಯ ರಾಮ ಮಂದಿರ ಶಿಲಾನ್ಯಾಸದ ವೇಳೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ದಳ ಮಾಹಿತಿ ನೀಡಿದೆ.

ಆಗಸ್ಟ್ 5 ರಂದು ಜಮ್ಮು ಕಾಶ್ಮೀರ ಹಾಗೂ ರಾಮ ಮಂದಿರ ಶಿಲಾನ್ಯಾಸ ನಡೆಯುವ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ದಳ ತಿಳಿಸಿದೆ. ಅಲ್ಲದೆ ಅಂದು 370ನೇ ವಿಧಿ ರದ್ದು ಪಡಿಸಿ ಒಂದು ವರ್ಷವಾಗಲಿದೆ. ಹೀಗಾಗಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಲ ವಾರಗಳ ಹಿಂದೆ ಗುಪ್ತಚರ ದಳಕ್ಕೆ ಲಭ್ಯವಾದ ಮಾಹಿತಿ ಪ್ರಕಾರ ಆಕಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯಂದು ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ವರದಿಯಾಗಿದೆ.

ram mandir ayodhya web

ಹಲವು ತಾಲಿಬಾನ್ ಉಗ್ರರಿಗೆ ಪಾಕಿಸ್ತಾನದ ಸ್ಪೆಷಲ್ ಸರ್ವೀಸ್ ಗ್ರೂಪ್ ಅಫ್ಘಾನಿಸ್ಥಾನದ ಜಲಾಲಾಬಾದ್‍ನಲ್ಲಿ ತರಬೇತಿ ನೀಡುತ್ತಿದ್ದು, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದು ಪಡಿಸಿ ವರ್ಷ ತುಂಬುತ್ತಿರುವ ಹಿನ್ನೆಲೆ ದಾಳಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಗುಪ್ತಚರ ದಳ ವಿವರವಾದ ಮಾಹಿತಿ ನೀಡಿದ ಬಳಿಕ ಅಯೋಧ್ಯೆ, ದೆಹಲಿ ಹಾಗೂ ಜಮ್ಮು ಕಾಶ್ಮೀರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

terrorists

ಜಮ್ಮು ಕಾಶ್ಮೀರದಲ್ಲಿ ದಾಳಿ ನಡೆಸಲು ಜಾಲಾಬಾದ್‍ನಲ್ಲಿ ಸುಮಾರು 20 ತಾಲಿಬಾನ್ ಉಗ್ರರಿಗೆ ಪಾಕಿಸ್ತಾನದ ಎಸ್‍ಎಸ್‍ಜಿ ಸೇನೆ ತರಬೇತಿ ನೀಡಿದೆ. ಮೇ 26 ಹಾಗೂ ಮೇ 29ರ ಮಧ್ಯೆ ದಾಳಿ ನಡೆಸುವ ಸಾಧ್ಯತೆ ಇತ್ತು. ಆದರೆ ಭದ್ರತಾ ಸಿಬ್ಬಂದಿ ಹೆಚ್ಚು ಎಚ್ಚರಿಕೆ ವಹಿಸಿದ್ದರಿಂದ ದಾಳಿ ನಡೆಸಲು ಸಾಧ್ಯವಾಗಿಲ್ಲ ಎಂದು ಗುಪ್ತಚರ ದಳ ತಿಳಿಸಿದೆ.

ಪಾಕಿಸ್ತಾನ ಸೇನೆ 20-25 ಉಗ್ರರನ್ನು ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಮೂಲಕ ಹಾಗೂ ಇನ್ನೂ ಐದಾರು ಜನರನ್ನು ಭಾರತ-ನೇಪಾಳ ಗಡಿಯಿಂದ ಒಳ ನುಸುಳಲು ಸಹಾಯ ಮಾಡುತ್ತಿದೆ. ಹೀಗಾಗಿ ಎಲ್ಲ ಏಜೆನ್ಸಿಗಳನ್ನು ಹಾಗೂ ಪೊಲೀಸರನ್ನು ಎಸ್‍ಒಪಿಯಂತೆ ಎಚ್ಚರದಿಂದಿರಲು ಸೂಚಿಸಲಾಗಿದೆ.

pm modi

ಆಗಸ್ಟ್ 5ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆ ಇದೆ. ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕೇಂದ್ರ ಸಚಿವೆ ಉಮಾ ಭಾರತಿ ಹಾಗೂ ಆರ್‍ಎಸ್‍ಎಸ್‍ನ ಹಲವು ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ.

TAGGED:AyodhyaBhoomi Poojaindian armyJammu and Kashmirprime minister modiPublic TVRam Mandirಅಯೋಧ್ಯೆಜಮ್ಮು ಕಾಶ್ಮೀರಪಬ್ಲಿಕ್ ಟಿವಿಪ್ರಧಾನಿ ಮೋದಿಭಾರತೀಯ ಸೇನೆರಾಮ ಮಂದಿರಶಿಲಾನ್ಯಾಸ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 minutes ago
DRINKING WATER 1
Bengaluru City

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
26 minutes ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
28 minutes ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
2 hours ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
2 hours ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?