ರಾಯಚೂರು: ಜಿಲ್ಲೆಗೆ ಮಹಾರಾಷ್ಟ್ರದ ನಂಟಿನ ಎಫೆಕ್ಟ್ ಇಂದು ಸಹ ಮುಂದುವರಿದಿದ್ದು ಹೊಸ 5 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ದೇವದುರ್ಗ ಪಟ್ಟಣದ ಸರ್ಕಾರಿ ಕ್ವಾರಂಟೈನ್‍ನಲ್ಲಿದ್ದ 5 ಜನರಲ್ಲಿ ಕೋವಿಡ್ 19 ಧೃಡವಾಗಿದೆ. ರೋಗಿ ಸಂಖ್ಯೆ 2321, ರೋಗಿ ಸಂಖ್ಯೆ 2322, ರೋಗಿ ಸಂಖ್ಯೆ 2323, ರೋಗಿ ಸಂಖ್ಯೆ 2324, ರೋಗಿ ಸಂಖ್ಯೆ 2325 ಮಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಮಹಾರಾಷ್ಟ್ರದಿಂದ ಬಂದವರನ್ನೆಲ್ಲಾ ನೇರವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಈಗ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರೆಲ್ಲರೂ ಕ್ವಾರಂಟೈನ್‍ನಲ್ಲಿದ್ದಾರೆ. ಅಲ್ಲಿಯೇ ಅವರನ್ನು ಐಸೋಲೇಷನ್ ಮಾಡಲಾಗಿದೆ. ಉಳಿದಂತೆ ಸೋಂಕಿತರನ್ನು ರಾಯಚೂರಿನ ಓಪೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement
ಇಂದಿನ 5 ಪ್ರಕರಣಗಳು ಸೇರಿ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 71 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನೂ ಮಸ್ಕಿ ಕೆನರಾ ಬ್ಯಾಂಕ್ ಸಿಬ್ಬಂದಿಗೆ ಪಾಸಿಟಿವ್ ಪ್ರಕರಣ ಹಿನ್ನೆಲೆ 22 ಜನ ಪ್ರಾಥಮಿಕ ಸಂಪರ್ಕಿತರನ್ನು ಸಾಂಸ್ಥಿಕ ಕ್ವಾರಂಟೈನ್ ಹಾಗೂ 54 ಮಂದಿ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ವ್ಯಕ್ತಿ ವಾಸವಾಗಿರುವ ಮಸ್ಕಿಯ ಪ್ರದೇಶವನ್ನ ಸೀಲ್ ಡೌನ್ ಮಾಡಲಾಗಿದೆ.