ರಾಯಚೂರು: ತಾಲೂಕಿನ ಕಲ್ಮಲ ಬಳಿ ನಡೆದ ಕಾರು ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ನಡೆದಿದೆ.
ರಸ್ತೆಯ ಪಕ್ಕದ ಗಿಡಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಮೃತ ವ್ಯಕ್ತಿಯನ್ನ ಸಿರವಾರ ತಾಲೂಕಿನ ಮಲ್ಲಟ ಗ್ರಾಮದ 60 ವರ್ಷದ ಸದಾನಂದಗೌಡ ಮಾಲೀಪಾಟೀಲ್ ಎಂದು ಗುರುತಿಸಲಾಗಿದೆ.
ಮಲ್ಲಟದಿಂದ ರಾಯಚೂರು ಕಡೆ ಹೊರಟಿದ್ದ ಸದಾನಂದಗೌಡ ಮಾಲೀಪಾಟೀಲ್ ಅವರಿಗೆ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಬರುವ ವೇಳೆಗೆ ಕಾರು ಸಂಪೂರ್ಣವಾಗಿ ಸುಟ್ಟಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.