ರಾಯಚೂರು: ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ವಿಮಾನ ನಿಲ್ದಾಣಕ್ಕೆ ಸಂಪುಟದ ಒಪ್ಪಿಗೆ ಪಡೆಯಲಾಗುವುದು. ವಿಮಾನ ನಿಲ್ದಾಣ ಬರುವದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
Advertisement
Advertisement
ಈಗಾಗಲೇ ಕೇಂದ್ರ ಸರ್ಕಾರ ಐಐಐಟಿ ನೀಡಿದೆ. ಏಮ್ಸ್ ರಾಯಚೂರು ಜಿಲ್ಲೆಗೆ ಬರಬೇಕೆಂದು ನಾನು ಉಸ್ತುವಾರಿ ಸಚಿವನಾಗಿ ಪ್ರಾಮಾಣಿಕ ಪ್ರಯತ್ನ ಮಾಡಲು ಸಿದ್ಧನಿದ್ದೇನೆ ಎಂದರು. ನಗರದ ಅಭಿವೃದ್ಧಿಗಾಗಿ 100 ಕೋಟಿ ನೀಡಲಾಗಿದೆ. ಮಳೆಗಾಲದ ನಂತರ ಕಾಮಗಾರಿ ಆರಂಭಿಸಲಾಗುವುದು. ಕೊರೊನಾದಿಂದಾಗಿ ಸ್ವಲ್ಪ ಅಭಿವೃದ್ಧಿ ಕುಂಠಿತವಾಗುತ್ತಿದೆ. ಭಗವಂತನಲ್ಲಿ ಪ್ರಾರ್ಥಿಸಿ ಕೊರೊನಾ ಬೇಗ ದೂರವಾಗಲಿ ಎಂದು ಆಶಿಸುತ್ತೇನೆ ಅಂತ ಸಚಿವ ಲಕ್ಷ್ಮಣ ಸವದಿ ಹೇಳಿದರು.
Advertisement