– ಮಹೋತ್ಸವಕ್ಕೆ ಇಂದು ಮಂತ್ರಾಲಯ ಶ್ರೀಗಳಿಂದ ಚಾಲನೆ
ರಾಯಚೂರು: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಯ 349ನೇ ಆರಾಧನಾ ಮಹೋತ್ಸವಕ್ಕೆ ಇಂದು ಚಾಲನೆ ಸಿಕ್ಕಿದ್ದು, ಗೋ ಪೂಜೆ, ಗಜ ಪೂಜೆ ಧ್ವಜಾರೋಹಣದ ಮೂಲಕ ಆರಾಧನಾ ಮಹೋತ್ಸವಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಚಾಲನೆ ನೀಡಿದರು.
Advertisement
ಆಗಸ್ಟ್ 2 ರಿಂದ 8 ರವರೆಗೆ ಆರಾಧನೆ ಹಿನ್ನೆಲೆ ಸಪ್ತರಾತ್ರೋತ್ಸವ ನಡೆಯಲಿದೆ. ಕೊರೊನಾ ಹಿನ್ನೆಲೆ ಈ ಬಾರಿ ಮಂತ್ರಾಲಯ ಮಠಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ. ಹೀಗಾಗಿ ಮಠದ ಆಡಳಿದ ಮಂಡಳಿ ಆರಾಧನಾ ಸಪ್ತರಾತ್ರೋತ್ಸವದ ಎಲ್ಲ ಕಾರ್ಯಕ್ರಮಗಳನ್ನು ಮಠದ ಅಧಿಕೃತ ಯೂ ಟ್ಯೂಬ್ ಚಾನಲ್ ‘ಮಂತ್ರಾಲಯ ವಾಹಿನಿ’ಯಲ್ಲಿ ನೇರಪ್ರಸಾರ ಮಾಡಲು ನಿರ್ಧರಿಸಿದೆ.
Advertisement
Advertisement
ಮಂತ್ರಾಲಯ ಮಠದ ಪ್ರಾಕಾರದಲ್ಲಿ ಮಾತ್ರ ಕಾರ್ಯಕ್ರಮಗಳು ನಡೆಯುತ್ತಿದ್ದು. ಧಾರ್ಮಿಕ, ಆಧ್ಯಾತ್ಮಿಕ, ಉತ್ಸವ, ಪ್ರವಚನ ಸೇರಿ ಎಲ್ಲ ಕಾರ್ಯಕ್ರಮಗಳನ್ನು ನೇರ ಪ್ರಸಾರ ಮಾಡಲಾಗುವುದು. ನಾಳೆ ಬೆಳಗ್ಗೆಯಿಂದ ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ ಮೂಲ ರಾಮದೇವರಿಗೆ ಪೂಜೆ ಹಾಗೂ ರಥೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ದೇಶದ ವಿವಿಧೆಡೆಯಿರುವ ಗುರುರಾಘವೇಂದ್ರ ಸ್ವಾಮಿಯ ಶಾಖಾ ಮಠಗಳಲ್ಲೂ ಏಳು ದಿನಗಳ ಕಾಲ ಸಡಗರದಿಂದ ಆರಾಧನಾ ಮಹೋತ್ಸವ ಆಚರಿಸಲಾಗುತ್ತದೆ.