ಮಡಿಕೇರಿ: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್‍ರವರು ಫೆಬ್ರವರಿ 7 ರಂದು ಕೊಡಗಿನ ಕೆ.ಎಸ್ ತಿಮ್ಮಯ್ಯ ಅವರ ಸನ್ನಿಸೈಡ್ ಮ್ಯೂಸಿಯಂನನ್ನು ಉದ್ಘಾಟಿಸುತ್ತಿದ್ದಾರೆ. ಈ ಮ್ಯೂಸಿಯಂನಲ್ಲಿ ಯುದ್ಧದ ಟ್ಯಾಂಕರ್, ಸೂಪರ್ ಸಾನಿಕ್, ಯುದ್ಧ ವಿಮಾನ ಸೇರಿದಂತೆ ಹಲವು ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗುತ್ತಿದೆ.
Advertisement
ಮಡಿಕೇರಿ-ಕೊಡಗು ಎಂದಾಗ ನೆನಪಿಗೆ ಬರುವುದು ನಾಡಿನ ಜೀವನದಿ ಕಾವೇರಿ ಉಗಮ ಸ್ಥಳ ತಲಕಾವೇರಿ. ಜೊತೆಗೆ ಅಲ್ಲಿನ ಸೇನೆ, ಕ್ರೀಡೆ ಜೊತೆಗೆ ಕಾಫಿ, ಏಲಕ್ಕಿ, ಕರಿಮೆಣಸು, ಕಿತ್ತಳೆ ಹಾಗೆಯೇ ಸಾಂಪ್ರದಾಯಿಕ ಉಡುಗೆ ಎಲ್ಲರ ಗಮನ ಸೆಳೆಯುತ್ತವೆ. ಜೊತೆಗೆ ಪ್ರವಾಸಿ ತಾಣಗಳು, ಜಲಪಾತಗಳು ಕಣ್ಮುಂದೆ ಬರುತ್ತದೆ. ಅದರೊಟ್ಟಿಗೆ ಇದೀಗ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಕೂಡ ಸೇರ್ಪಡೆಯಾಗುತ್ತಿದೆ.
Advertisement
ಭಾರತೀಯ ಸೇನೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕೊಡಗು ಜಿಲ್ಲೆ ರಾಷ್ಟ್ರದ ಭೂಸೇನೆ, ವಾಯುಸೇನೆ, ನೌಕಸೇನೆಗಳ ಪ್ರಥಮ ಮಹಾದಂಡನಾಯಕರಾಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರನ್ನು ಒಳಗೊಂಡಂತೆ ಸೇನಾ ಕ್ಷೇತ್ರದಲ್ಲಿ ಹಲವರು ದುಡಿದಿದ್ದಾರೆ. ಅವರಲ್ಲಿ ಪ್ರಮುಖವಾಗಿ ಜನರಲ್ ಕೊಡಂದೇರ ಸುಬ್ಬಯ್ಯ ತಿಮ್ಮಯ್ಯ ಅವರು ಪ್ರಮುಖರಾಗಿದ್ದಾರೆ. ಜನರಲ್ ತಿಮ್ಮಯ್ಯ ಅವರು 1906 ಮಾರ್ಚ್, 31 ರಂದು ಸನ್ನಿಸೈಡ್ ಎಂಬ ಬಂಗಲೆಯಲ್ಲಿ ಹುಟ್ಟಿ ಬೆಳೆದ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಮಾಡಿದೆ.
Advertisement
Advertisement
ವಸ್ತು ಸಂಗ್ರಹಾಲಯ ಆವರಣಕ್ಕೆ ಭೇಟಿ ನೀಡುತ್ತಿದ್ದಂತೆ ಯುದ್ಧ ಟ್ಯಾಂಕ್, ಯುದ್ಧ ವಿಮಾನ ಕಣ್ಮಣ ಸೆಳೆಯುತ್ತವೆ. ಹಾಗೆಯೇ ಯುದ್ಧ ಸ್ಮಾರಕ ಗಮನ ಸೆಳೆಯುತ್ತದೆ. ನಂತರ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುತ್ತಿದ್ದಂತೆ ಜನರಲ್ ತಿಮ್ಮಯ್ಯ ಅವರ ಬಾಲ್ಯ, ಸೇನಾ ಕ್ಷೇತ್ರದಲ್ಲಿನ ವಿವಿಧ ಛಾಯಾಚಿತ್ರಗಳು ಆಕರ್ಷಿಸುತ್ತವೆ. ಜನರಲ್ ತಿಮ್ಮಯ್ಯ ಅವರ ವ್ಯಕ್ತಿ ಚರಿತ್ರೆ, ಭಾರತೀಯ ಸೇನೆಯ ಇತಿಹಾಸವನ್ನು ವಸ್ತು ಸಂಗ್ರಹಾಲಯದಲ್ಲಿ ನೋಡಬಹುದಾಗಿದೆ. ವಸ್ತು ಸಂಗ್ರಹಾಲಯದ ಪ್ರತಿ ಕೊಠಡಿಯು ಸೈನಿಕರ ಕತೆ ಹೇಳುವಂತಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಜನರಲ್ ತಿಮ್ಮಯ್ಯ ಅವರ ಸ್ಮಾರಕ ಭವನ ಅದ್ಭುತವಾಗಿ ವಿನ್ಯಾಸಗೊಳಿಸಲಾಗಿದ್ದು, ಭಾರತೀಯ ಸೇನಾಧಿಕಾರಿಯಾಗಿ ನಡೆದು ಬಂದ ದಾರಿಯ ಇತಿಹಾಸ ಸಾರುವುದರ ಜೊತೆಗೆ ಭಾರತೀಯ ಸೇನಾ ಪರಂಪರೆಯ ಮಾಹಿತಿ ನೀಡುವ ಮಹತ್ವದ ಸಂದೇಶ ವಸ್ತು ಸಂಗ್ರಹಾಲಯದಲ್ಲಿದೆ. ವಸ್ತು ಸಂಗ್ರಹಾಲಯದಲ್ಲಿ ಯುದ್ಧದಲ್ಲಿ ಬಳಸಲಾಗುತ್ತಿದ್ದ ಬಂದೂಕುಗಳು ಗಮನ ಸೆಳೆಯುತ್ತವೆ. ಕೊಡಗಿನ ಸೇನಾ ಪರಂಪರೆ ಹಾಗೂ ಸಂಸ್ಕøತಿಯನ್ನು ಬಿಂಭಿಸುವ ಜನರಲ್ ಕೆ.ತಿಮ್ಮಯ್ಯ ಮ್ಯೂಸಿಯಂನ್ನು ಗೌರವಾನ್ವಿತ ರಾಷ್ಟ್ರಪತಿ ಉದ್ಘಾಟಿಸುತ್ತಿರುವುದು ವಿಶೇಷವಾಗಿದೆ.
ತಿಮ್ಮಯ್ಯ ಅವರು ಹುಟ್ಟಿ ಬೆಳೆದ ಸನ್ನಿಸೈಡ್ ನಿವಾಸವನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಲಾಗಿದ್ದಯ, ತಿಮ್ಮಯ್ಯ ಅವರ ಬಾಲ್ಯ ಕುರಿತು ಕಲಾಕೃತಿಗಳು, ತಿಮ್ಮಯ್ಯನವರು ಸೇನಾಧಿಕಾರಿಯಾಗಿ ಸಲ್ಲಿಸಿದ ಸೇವೆಯ ಛಾಯಾ ಚಿತ್ರಗಳು ಗಮನ ಸೆಳೆಯುತ್ತವೆ.