– ಆಡಳಿತದ ನಿರುದ್ಯೋಗ ಪರ್ವ ಮುಂದುವರಿದಿದೆ ಅಂದ ಸಿದ್ದು
ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರ 70ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಶುಭಹಾರೈಸುತ್ತಿದ್ದಾರೆ. ಈ ಮಧ್ಯೆ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ವಿಭಿನ್ನವಾಗಿ ವಿಶ್ ಮಾಡಿದ್ದಾರೆ. ಇನ್ನೊಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತದ ನಿರುದ್ಯೋಗ ಪರ್ವ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಪೊಳ್ಳು ಭರವಸೆ ನೀಡಿ., ತಮ್ಮ ಎಡಬಿಡಂಗಿ ಆಡಳಿತ ನೀತಿಯ ಮೂಲಕ ಕಳೆದ 6 ತಿಂಗಳಲ್ಲಿ 2.1 ಕೋಟಿ ಯುವಕರ ಉದ್ಯೋಗ ಕಸಿದು ಅವರನ್ನು ಬೀದಿಗೆ ಬರುವಂತೆ ಮಾಡಿದ ಶ್ರೀಯುತ #NarendraModi ಯವರ ಜನ್ಮದಿನದ ಅರ್ಥಾತ್ ' ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ'ಯ ಹಾರ್ದಿಕ ಶುಭಾಶಯಗಳು.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 17, 2020
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಗುಂಡೂರಾವ್, ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಪೊಳ್ಳು ಭರವಸೆ ನೀಡಿ, ತಮ್ಮ ಎಡಬಿಡಂಗಿ ಆಡಳಿತ ನೀತಿಯ ಮೂಲಕ ಕಳೆದ 6 ತಿಂಗಳಲ್ಲಿ 2.1 ಕೋಟಿ ಯುವಕರ ಉದ್ಯೋಗ ಕಸಿದು ಅವರನ್ನು ಬೀದಿಗೆ ಬರುವಂತೆ ಮಾಡಿದ ನರೇಂದ್ರ ಮೋದಿಯವರ ಜನ್ಮದಿನದ ಅರ್ಥಾತ್ ‘ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ’ಯ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
Advertisement
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ @narendramodi ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ.
ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ.
1/2#NationalUnemploymentDay pic.twitter.com/YYWNW6DgKN
— Siddaramaiah (@siddaramaiah) September 17, 2020
Advertisement
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ ಎಂದು ಬರೆದು ರಾಷ್ಟ್ರೀಯ ನಿರುದ್ಯೋಗ ದಿನವೆಂದು ಹ್ಯಾಶ್ ಟ್ಯಾಗ್ ಹಾಕಿದ್ದಾರೆ.
Advertisement
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ @narendramodi ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ.
ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ.
1/2#NationalUnemploymentDay pic.twitter.com/YYWNW6DgKN
— Siddaramaiah (@siddaramaiah) September 17, 2020
ನರೇಂದ್ರ ಮೋದಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು?, ದೇಶದ ಯುವಜನ ಕೇಳುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.
Wishing PM Narendra Modi ji a happy birthday.
— Rahul Gandhi (@RahulGandhi) September 17, 2020
ಇನ್ನು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಅವರು ಚುರುಕು ನಾಯಕತ್ವ, ದೃಢ ನಿರ್ಧಾರ, ನಿರ್ಣಾಯಕ ಕ್ರಮದಿಂದ ಭಾರತ ಸಾಕಷ್ಟು ಲಾಭ ಗಳಿಸಿದೆ. ಬಡವರು ಹಾಗೂ ನಿರ್ಗತಿಕರ ಸಬಲೀಕರಣಕ್ಕಾಗಿ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಅವರ ನಾಯಕತ್ವದಲ್ಲಿ ರಾಷ್ಟ್ರಕ್ಕೆ ಅಪಾರ ಪ್ರಯೋಜನವಾಗಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.