ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆಯೇ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದೆ. ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ.
ಅದೃಷ್ಟವಶಾತ್ ಗ್ಯಾಸ್ ಅನಿಲ ಸೋರಿಕೆಯಾಗಿಲ್ಲ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮನೆಗಳಲ್ಲಿ ಬೆಂಕಿ ಬಳಸದಂತೆ ಮೈಕ್ ನಲ್ಲಿ ಸೂಚನೆ ನೀಡಲಾಯಿತು. ಬಳಿಕ ಎಂಆರ್ ಪಿಎಲ್ ನಿಂದ ಪರಿಣಿತರ ತಂಡ ಆಗಮಿಸಿ ಟ್ಯಾಂಕರ್ ಸ್ಥಳಾಂತರ ಮಾಡಲಾಗಿದೆ.