ಮುಂಬೈ: ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಸೋದರ ಶೌವಿಕ್ ಚಕ್ರವರ್ತಿ ಇಬ್ಬರ ನ್ಯಾಯಾಂಗ ಬಂಧನವನ್ನ ಅಕ್ಟೋಬರ್ 20ರವರೆಗೆ ವಿಸ್ತರಿಸಿ ಮುಂವೈ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಇಂದು ಇಬ್ಬರ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಪ್ರಕರಣದ ವಿಚಾರಣೆ ನ್ಯಾಯಾಲಯದ ಮುಂದೆ ಬಂದಿತ್ತು. ಮತ್ತೆ ಇಬ್ಬರನ್ನು ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದಲ್ಲಿ ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ)ಯಿಂದ ಬಂಧನಕ್ಕೊಳಗಾಗಿರುವ ರಿಯಾ ಮತ್ತು ಶೌವಿಕ್ ಜೈಲಿನಲ್ಲಿದ್ದಾರೆ. ರಿಯಾ ಹಲವು ಬಾರಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ರೂ ಬೇಲ್ ಸಿಕ್ಕಿಲ್ಲ.
Special NDPS Court extends judicial custody of Rhea Chakraborty, Showik Chakraborty and others till 20th October. #SushantSinghRajputDeathCase
— ANI (@ANI) October 6, 2020
ಸೆಪ್ಟೆಂಬರ್ 8ರಂದು ವಿಚಾರಣೆಗೆ ಹಾಜರಾಗಿದ್ದ ನಟಿ ರಿಯಾ ಚಕ್ರವರ್ತಿಯನ್ನು ಎನ್‍ಸಿಬಿ ಬಂಧಿಸಿತ್ತು. ಡ್ರಗ್ಸ್ ಪ್ರಕರಣದಲ್ಲಿ ಎನ್‍ಸಿಬಿ ಇದುವವರೆಗೂ 20 ಆರೋಪಿಗಳನ್ನ ಬಂಧಿಸಿದೆ. ರಿಯಾ ಮತ್ತು ಶೌವಿಕ್ ಇಬ್ಬರು ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕದಲ್ಲಿರೋ ವಿಷಯ ಸಿಬಿಐ ತನಿಖೆ ವೇಳೆ ತಿಳಿದು ಬಂದಿತ್ತು. ಸಿಬಿಐ ಶಿಫಾರಸ್ಸಿನ ಮೇರೆಗೆ ಎನ್‍ಸಿಬಿ ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿತ್ತು. ಇದನ್ನೂ ಓದಿ: ಸುಶಾಂತ್ ರೀತಿಯಲ್ಲಿ ಮತ್ತೋರ್ವ ನಟನ ಅನುಮಾನಾಸ್ಪದ ಸಾವು
ಡ್ರಗ್ಸ್ ಪೆಡ್ಲರ್ ಜೊತೆ ರಿಯಾ ನಡೆಸಿದ್ದ ವಾಟ್ಸಪ್ ಸಂಭಾಷಣೆಯನ್ನ ಖಾಸಗಿ ಮಾಧ್ಯಮ ವರದಿ ಮಾಡಿತ್ತು. ಅಕ್ಕ ರಿಯಾ ಸೂಚನೆಯ ಮೇರೆಗೆ ಡ್ರಗ್ಸ್ ಖರೀದಿಸುತ್ತಿದ್ದೆ ಎಂದು ಶೌವಿಕ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯರಾದ ರಕುಲ್ ಪ್ರೀತ್ ಸಿಂಗ್, ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಎನ್‍ಸಿಬಿಯ ವಿಚಾರಣೆ ಎದುರಿಸಿದ್ದಾರೆ. ಇದನ್ನೂ ಓದಿ: ನಟಿಗೆ ಸುಶಾಂತ್ ಕಿಸ್- ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್
ಸುಶಾಂತ್ ಪ್ರಕರಣದಲ್ಲಿ ಕೇಳಿ ಬಂದಿರುವ ಕೊಲೆ ಆರೋಪಗಳನ್ನು ಏಮ್ಸ್ ವೈದ್ಯ ಸುಧೀರ್ ಗುಪ್ತಾ ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. ಸುಶಾಂತ್ ದೇಹದಲ್ಲಿ ಯಾವುದೇ ವಿಷ ಪದಾರ್ಥ ಅಥವಾ ಕೆಮಿಕಲ್ ಇರಲಿಲ್ಲ. ಹಾಗಾಗಿ ಇದು ಕೊಲೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಬನಮ್ಮ ವರದಿಯನ್ನು ಸೆಪ್ಟೆಂಬರ್ 28ರಂದು ಸಿಬಿಐಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುಶಾಂತ್ ಸಿಂಗ್ ಕುರಿತು ಸಲ್ಮಾನ್ ಟ್ವೀಟ್- ನೆಟ್ಟಿಗರಿಂದ ಆಕ್ರೋಶ
ಮೊದಲಿಗೆ ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಶವ ಪರೀಕ್ಷೆ ನಡೆಸಿ ಮುಂಬೈನ ಕೂಪರ್ ಆಸ್ಪತ್ರೆ ವೈದ್ಯರು ನೀಡಿದ ವರದಿಯ ಮೇಲೆ ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ ಸಿಬಿಐ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ವೈದ್ಯಕೀಯ ವರದಿ ನೀಡುವಂತೆ ಡಾ.ಸುಧೀರ್ ಗುಪ್ತಾ ನೇತೃತ್ವದ ಐವರು ಏಮ್ಸ್ ವೈದ್ಯರ ತಂಡಕ್ಕೆ ನೀಡಲಾಗಿತ್ತು. ಏಮ್ಸ್ ವೈದ್ಯರ ತಂಡಕ್ಕೆ ಸೆಪ್ಟೆಂಬರ್ 20ಕ್ಕೆ ವರದಿ ಸೂಚಿಸುವಂತೆ ಸಿಬಿಐ ಸೂಚಿಸಿತ್ತು. ಆದ್ರೆ ವೈದ್ಯರು ಸೆಪ್ಟೆಂಬರ್ 28ರಂದು ವರದಿ ನೀಡಿದ್ದರು.