ಹುಬ್ಬಳ್ಳಿ: ಬಾದಾಮಿಯಲ್ಲಿನ ನರೆ ಪರಿಸ್ಥಿತಿ ವೀಕ್ಷಿಸಿ, ಕ್ಷೇತ್ರ ಪ್ರವಾಸ ಮಾಡಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಫುಲ್ ರಿಲ್ಯಾಕ್ಸ್ ಮೂಡ್‍ನಲ್ಲಿದ್ದು, ಕಳೆದ ರಾತ್ರಿ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಣೆ ಮಾಡಿದ್ದಾರೆ.
ಎರಡು ದಿನಗಳ ಕಾಲ ತಮ್ಮ ಕ್ಷೇತ್ರ ಬದಾಮಿಗೆ ಭೇಟಿ ನೀಡಿ, ನೆರೆ ಹಾಗೂ ಜನರ ಸಮಸ್ಯೆಗಳನ್ನು ಆಲಿಸಿ ನಿನ್ನೆ ಹುಬ್ಬಳ್ಳಿಗೆ ಆಗಮಿಸಿದ್ದು, ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಸಿದ್ದರಾಮಯ್ಯ ಬುಧವಾರ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಪಂದ್ಯವನ್ನು ಹೊಟೇಲ್ ನಲ್ಲಿ ವೀಕ್ಷಿಸಿ ರಿಲ್ಯಾಕ್ಸ್ ಮಾಡಿದ್ದಾರೆ.
ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ತಮ್ಮ ಕ್ಷೇತ್ರ ಬಾದಾಮಿಯಲ್ಲಿ ಪ್ರವಾಸ ಮಾಡಿ ಮರಳಿದ್ದಾರೆ. ಕ್ಷೇತ್ರದಲ್ಲಿನ ನೆರೆ ಹಾಗೂ ವಿವಿಧ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ಬಿಡುವು ಸಿಕ್ಕಿದ್ದರಿಂದ ಐಪಿಎಲ್ ಪಂದ್ಯ ವೀಕ್ಷಿಸಿದ್ದಾರೆ.