ಬೆಂಗಳೂರು: ರೆಮ್‍ಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಲಿಕಾನ್ ಸಿಟಿ ಪೊಲೀಸರು ಬಂಧಿಸಿದ್ದಾರೆ.
ಸಂತೋಷ್ ಹಾಗೂ ಸುನೀಲ್ ಬಂಧಿತ ಆರೋಪಿಗಳು. ಸಂತೋಷ್ ಖಾಸಗಿ ಆಸ್ಪತ್ರೆ ಸಿಬ್ಬಂದಿಯಾಗಿದ್ರೆ, ಸುನೀಲ್ ಅಂಬುಲೆನ್ಸ್ ಡ್ರೈವರ್ ಆಗಿದ್ದಾನೆ. ಆರೋಪಿಗಳು ರೆಮ್‍ಡಿಸಿವರ್ ಇಂಜೆಕ್ಷನ್ ಅನ್ನು ಹೆಚ್ಚಿನ ಹಣಕ್ಕೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು.
ಬಸವೇಶ್ವರ ನಗರದಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 8 ರೆಮ್‍ಡಿಸಿವರ್ ಇಂಜೆಕ್ಷನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.