ಬೆಂಗಳೂರು: ಹಣ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: ಅತ್ಯಾಚಾರದ ಕೇಸ್ ಹಾಕ್ತೀನಿ – ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಮಹಿಳೆ ಅವಾಜ್
ಸಂಗೀತಾ ಗೋಪಾಲ್ ವಿರುದ್ಧ ದೂರು ದಾಖಲಾಗಿದೆ. ಸಂಗೀತಾ ಗೋಪಾಲ್ ಡ್ರಗ್ಸ್ ಪೆಡ್ಲರ್ ರಾಹುಲ್ ಆಪ್ತೆ ಎನ್ನಲಾಗುತ್ತಿದೆ. ಇಂದಿರಾನಗರ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯಾ ದೂರು ನೀಡಿದ್ದಾರೆ.
Advertisement
Advertisement
ಸಂಗೀತಾ ಗೋಪಾಲ್ ಬ್ಯಾಂಕ್ ಅಧಿಕಾರಿಗಳಿಗೆ ಸುಳ್ಳು ರೇಪ್ ಕೇಸ್ ಹಾಕುತ್ತೇನೆ ಎಂದು ಧಮ್ಕಿ ಹಾಕಿದ್ದಳು. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
Advertisement
ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲೂ ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಇದೀಗ ಬ್ಯಾಂಕ್ ಅಧಿಕಾರಿಯನ್ನ ಅಶ್ಲೀಲವಾಗಿ ನಿಂದಿಸಿದ್ದಾರೆಂದು ದೂರು ನೀಡಲಾಗಿದೆ. ಸದ್ಯ ಸಾಮಾಜಿಕ ಕಾರ್ಯಕರ್ತೆ ದೂರಿನ ಅನ್ವಯ ಸಂಗೀತಾಳನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.
Advertisement
ಏನಿದು ಪ್ರಕರಣ?
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಸಂಗೀತಾ ಗೋಪಾಲ್ ಮನೆಗೆ ಬಂದಿದ್ದರು. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿ ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಳು. ಸಂಗೀತಾ ಗೋಪಾಲ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಸಂಗೀತಾ ಬೆದರಿಕೆ ಹಾಕಿದ್ದಳು. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್‍ಬುಕ್‍ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಳು. ಈ ವೇಳೆ ಸಿಬ್ಬಂದಿಯೋರ್ವರು ಸಂಗೀತಾ ಗೋಪಾಲ್ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರು ಮಹಿಳೆ ದರ್ಪ ತೋರಿದ್ದಳು. ಹಿರಿಯ ನಾಗರೀಕರು ಎಂಬ ಅರಿವಿಲ್ಲದೇ ಸಂಗೀತಾ ಗೋಪಾಲ್ ನಡೆದುಕೊಂಡ ರೀತಿಗೆ ನೆಟ್ಟಗರು ಛೀಮಾರಿ ಹಾಕಿದ್ದರು.
Bank officials go for recovery. Debtors wife abuses & threatens with #FalseRape case.
There'll be no condemnation, no action on this woman for threatening to put false cases@sharmarekha will say this isn't what @NCWIndia is mandated with & wash off their hands#WeepIndiaWeep pic.twitter.com/NrONwkkogn
— Amit Deshpande (@amitdeshmra) September 6, 2020