Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತನಾದ ನಿಖಿಲ್ ಕುಮಾರಸ್ವಾಮಿ – ಅನ್ನದಾತರ ಬಗ್ಗೆ ‘ಅಭಿಮನ್ಯು’ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತನಾದ ನಿಖಿಲ್ ಕುಮಾರಸ್ವಾಮಿ – ಅನ್ನದಾತರ ಬಗ್ಗೆ ‘ಅಭಿಮನ್ಯು’ ಮಾತು

Bengaluru City

ರೈತನಾದ ನಿಖಿಲ್ ಕುಮಾರಸ್ವಾಮಿ – ಅನ್ನದಾತರ ಬಗ್ಗೆ ‘ಅಭಿಮನ್ಯು’ ಮಾತು

Public TV
Last updated: July 1, 2020 11:59 pm
Public TV
Share
2 Min Read
Nikhil Kumaraswamy
SHARE

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಟ, ನಿಖಿಲ್ ಕುಮಾರಸ್ವಾಮಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅನ್ನದಾತರ ಬಗ್ಗೆ ಬರೆದುಕೊಂಡಿದ್ದಾರೆ.

ನಮ್ಮ ದೇಶ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತ ಈ ದೇಶದ ಬೆನ್ನೆಲುಬು ಎಂದು ಗೌರವ ಸಲ್ಲಿಸುತ್ತೇವೆ. ಆದರೆ ರೈತರ ಮಕ್ಕಳು ರೈತರಾಗಿ ಅವರ ಕೃಷಿಭೂಮಿಯಲ್ಲಿ ದುಡಿಯಲು ಹಿಂಜರಿದು ನಗರದ ಕಡೆಗೆ ವಲಸೆ ಬಂದು ಬದುಕು ಕಟ್ಟಿಕೊಳ್ಳಲು ಹವಣಿಸುವವರ ಸಂಖ್ಯೆಯೇ ಹೆಚ್ಚು. ತಾವು ಕಲಿತ ವಿದ್ಯಾಭ್ಯಾಸದ ಆಧಾರದ ಮೇಲೆ ನಗರಗಳಲ್ಲಿ ಕೆಲಸವೊಂದನ್ನು ಸಂಪಾದಿಸಿ ಜೀವನ ನಡೆಸುವವರು ಒಂದು ಕಡೆಯಾದರೆ ಇನ್ನು ಕೆಲವರು ಸ್ವಂತ ಉದ್ಯೋಗ ಅಥವಾ ಕೂಲಿ ಕೆಲಸವನ್ನಾದರೂ ನಗರದಲ್ಲಿ ಮಾಡಿಕೊಂಡು ಜೀವನ ನಡೆಸಲು ನಗರಗಳ ಕಡೆಗೆ ಮುಖಮಾಡುವವರು ಇನ್ನೊಂದು ಕಡೆ. ಇದರ ಪರಿಣಾಮವಾಗಿ ಹಳ್ಳಿಗಳಲ್ಲಿರುವ ಕೃಷಿಭೂಮಿಗಳು ಪಾಲು ಬೀಳುತ್ತಿವೆ. ನಗರದಲ್ಲಿ ವೃತ್ತಿ ಸ್ಪರ್ಧೆ ತಾರಕಕ್ಕೇರಿದೆ.

Nikhil kumaraswamy 3 1

ಡಾಕ್ಟರ್ ತನ್ನ ಮಗ ಡಾಕ್ಟರ್ ಆಗಲಿ, ಪೊಲೀಸ್ ತನ್ನ ಮಗನೂ ತನ್ನಂತೆಯೇ ಪೊಲೀಸ್ ಆಗಲಿ ಸರ್ಕಾರಿ ನೌಕರ ತನ್ನ ಮಗನೂ ಸರ್ಕಾರಿ ನೌಕರನಾಗಲಿ ಎಂದು ಆಸೆ ಪಡುತ್ತಾನೆ. ಆದರೆ ನಮ್ಮ ದೇಶದ ರೈತ ತನ್ನ ಮಗನೂ ರೈತನಾಗಲಿ ಎಂದು ಎಂದೂ ಬಯಸದ ಪರಿಸ್ಥಿತಿ ಇದೆ. ತಾನು ಪಟ್ಟ ಕಷ್ಟ ತನಗೇ ಕೊನೆಯಾಗಲಿ ನನ್ನ ಮಕ್ಕಳಿಗೆ ಈ ಕಷ್ಟ ಬೇಡ ಎಂದು ಸಾಲ ಮಾಡಿಯಾದರೂ ಮಕ್ಕಳನ್ನು ಓದಿಸಿ ಉದ್ಯೋಗಕ್ಕಾಗಿ ನಗರಗಳಿಗೆ ಕಳುಹಿಸುತ್ತಾರೆ. ರೈತರಿಗೆ ತಾವು ಏನೇ ಬೆಳೆದರೂ ಅದಕ್ಕೆ ಬೆಲೆ ನಿಗದಿ ಮಾಡುವ ಅಧಿಕಾರವೂ ಆತನಿಗಿಲ್ಲ.

Nikhil kumaraswamy 2 1

ಜೀವಮಾನವಿಡೀ ದುಡಿದು ಬದುಕುವ ರೈತನಿಗೆ ಈ ದೇಶದ ಮೊದಲ ಗೌರವ ಸಿಗಬೇಕಿದ್ದು ಸರ್ಕಾರಿ ಅಧಿಕಾರಿಗಳು ಹಾಗೂ ಬ್ಯಾಂಕ್ ನೌಕರರು ರೈತರು ತಮ್ಮ ಕಚೇರಿಗೆ ಬಂದಾಗ ಗೌರವದಿಂದ ನಡೆಸಿಕೊಳ್ಳಬೇಕು. ಜಮೀನಿನಲ್ಲಿ ಮುಳ್ಳು ಚುಚ್ಚಿ ಮಣ್ಣಿಗೆ ರಕ್ತದ ಅಭಿಷೇಕವಾದರೂ ಮರುದಿನ ಅದೇ ಜಮೀನಿನಲ್ಲಿ ಕೆಲಸ ಮಾಡುವ ರೈತನಿಗೆ ಘನತೆಯ ಬದುಕನ್ನು ಕಟ್ಟಿ ಕೊಡಬೇಕಿದೆ. ರೈತರ ಮಕ್ಕಳು ಕೃಷಿಭೂಮಿಯಲ್ಲಿ ಕೆಲಸ ಮಾಡುವುದು ಒಂದು ಗೌರವ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು.ರೈತನಾಗಿ ಬದುಕುವುದು ದೌರ್ಭಾಗ್ಯವಲ್ಲ ಬದಲಾಗಿ ಅದೊಂದು ಸೌಭಾಗ್ಯ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು.

Nikhil kumaraswamy 1

ನಗರದಿಂದ ಮತ್ತೆ ಊರುಗಳಿಗೆ ಹಿಂದಿರುಗಿ ತಮ್ಮ ತಮ್ಮ ಕೃಷಿಭೂಮಿಗಳಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ನಿಮಗೆಲ್ಲರಿಗೂ ಯಶಸ್ಸು ಸಿಗಲಿ. ರೈತನ ಮಗನೆಂದು ಹೆಮ್ಮೆಯಿಂದ ಹೇಳಿ. ವಿದ್ಯಾಭ್ಯಾಸವಿರುವ ಯುವಕರು ವ್ಯವಸಾಯಕ್ಕಾಗಿ ಜಮೀನಿಗಿಳಿದರೆ ಮಧ್ಯವರ್ತಿಗಳ ಮೋಸವೂ ಕಡಿಮೆಯಾಗಲಿದೆ. ಆಧುನಿಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಬಳಸಿಕೊಳ್ಳುವ ಅವಕಾಶವಿದೆ. ಕೃಷಿಯಲ್ಲೆ ಉನ್ನತ ಪದವಿ ಪಡೆದ ರೈತರ ಮಕ್ಕಳೇ ದೇಶದ ಕೃಷಿನೀತಿಯನ್ನು ನಿರ್ಧರಿಸುವಂತಾಗಲಿ. ಇದರ ಜೊತೆಗೆ ಸರ್ಕಾರಗಳು ಸಹಾ ಕೃಷಿ ಚಟುವಟಿಕೆಗಳಿಗೆ ಸೂಕ್ತ ಪ್ರೋತ್ಸಾಹವನ್ನು ನೀಡಿದರೆ ದೇಶದಲ್ಲಿ ರೈತನೆಂದರೆ ಎದ್ದು ಕೈಮುಗಿಯುವ ದಿನಗಳು ದೂರವಿಲ್ಲ.

nikhilgowda jaguar 87717244 607162686509629 3800231147951377876 n

ನಾನು ಸಹಾ ರೈತನ ಮಗನಾಗಿದ್ದು ನಮ್ಮ ಜಮೀನಿನಲ್ಲಿ ವ್ಯವಸಾಯ ನಡೆಸಬೇಕೆಂದು ನಿರ್ಧರಿಸಿ ನಮ್ಮ ತೋಟದಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದೇನೆ. ಇದೇ ರೀತಿ ನಗರದಿಂದ ಹಳ್ಳಿಗಳಿಗೆ ಹಿಂತಿರುಗಿ ವ್ಯವಸಾಯದಲ್ಲಿ ತೊಡಗಿರುವ ಎಲ್ಲಾ ರೈತರ ಮಕ್ಕಳಿಗೂ ಯಶಸ್ಸು ಸಿಗಲಿ ಎಂದು ನಿಖಿಲ್ ಕುಮಾರಸ್ವಾಮಿ ಹಾರೈಸಿದ್ದಾರೆ.

TAGGED:farmerhd kumaraswamynikhil kumaraswamyPublic TVsandalwoodನಿಖಿಲ್ ಕುಮಾರಸ್ವಾಮಿಪಬ್ಲಿಕ್ ಟಿವಿರೈತಸ್ಯಾಂಡಲ್‍ವುಡ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
10 seconds ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
1 minute ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
44 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
45 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?