– ಇಂದು ಬಸ್ ಸಿಗುತ್ತಾ, ಇಲ್ವಾ..?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೈತರ ಜೊತೆಗೆ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಿಬ್ಬಂದಿಯೂ ಪ್ರತಿಭಟನೆ ನಡೆಸ್ತಿದ್ದಾರೆ.
Advertisement
10 ಸಾವಿರಕ್ಕೂ ಅಧಿಕ ಸಿಬ್ಬಂದಿ ರೈತರ ಜೊತೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಣೆ ಮಾಡ್ಬೇಕು, ಸಿಬ್ಬಂದಿ ಮೃತಪಟ್ಟರೆ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ 30 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.
Advertisement
Advertisement
ಸಾರಿಗೆ ಸಿಬ್ಬಂದಿಯ ಪ್ರತಿಭಟನೆಯಿಂದ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಬಸ್‍ಗಳ ಓಡಾಟದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಆದರೆ ಸಾರಿಗೆ ಇಲಾಖೆಯಲ್ಲಿ 1 ಲಕ್ಷದ 30 ಸಾವಿರ ಸಿಬ್ಬಂದಿ ಇದ್ದು, ಬಸ್‍ಗಳ ಓಡಾಟದಲ್ಲಿ ಯಾವುದೇ ವ್ಯತ್ಯಯ ಆಗಲ್ಲ ಎಂದು ಕೆಎಸ್‍ಆರ್‍ಟಿಸಿ ಸಿಬ್ಬಂದಿಯ ಯೂನಿಯನ್ ಮುಖಂಡ ಅನಂತ ಸುಬ್ಬರಾವ್ ತಿಳಿಸಿದ್ದಾರೆ.
Advertisement
ಸಾರಿಗೆ ನೌಕರರ ಬೇಡಿಕೆಗಳೇನು?:
* ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿಸಬೇಕು.
* ಕೊರೋನಾ ವಾರಿಯರ್ಸ್ ಆಗಿ ಸಾರಿಗೆ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ.
* ಸಾರಿಗೆ ನೌಕರರು ಕೊರೋನಾದಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಾಗಿ ಸಾರಿಗೆ ಸಚಿವರು ಹೇಳಿದ್ರು, ಆ ಆದೇಶವನ್ನ ಅಧಿಕೃತವಾಗಿ ಜಾರಿಗೆ ತರಬೇಕು.
* ಸಾಕಷ್ಟು ನೌಕರರಿಗೆ ಡ್ಯೂಟಿ ಸಿಗುತ್ತಿಲ್ಲ, ಡ್ಯೂಟಿ ಸಿಗದೆ ಇದ್ರು ಹಾಜರಾತಿ ನೀಡಬೇಕು.