ರೈತರ ಪರವಾಗಿ ಪ್ರಧಾನಿಗೆ ಧನ್ಯವಾದ ಸಲ್ಲಿಸಿದ ಬಿಎಸ್‍ವೈ

Public TV
1 Min Read
cm pm

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಡಿ 1 ಲಕ್ಷ ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದ ರೈತರ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಕೃಷಿ ವಲಯದ ಮೂಲ ಸೌಕರ್ಯಗಳ ಅಭಿವೃದ್ಧಿ 1 ಲಕ್ಷ ಕೋಟಿ ರೂ. ಅನುದಾನ

ಸಿಎಂ ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ರಾಜ್ಯದ ಸುಮಾರು 52.50 ಲಕ್ಷ ಕೃಷಿ ಕುಟುಂಬಗಳಿಗೆ ಲಾಭದಾಯಕವಾಗಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ, ಈ ವರ್ಷದ ಮೂರು ಕಂತುಗಳಲ್ಲಿ ಮೊದಲ ಕಂತಿನ ಮೊತ್ತ 1,049 ಕೋಟಿ ರೂ. ಬಿಡುಗಡೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕದ ರೈತರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

pm modi

“2020 ಆಗಸ್ಟ್ 9 ರಂದು ಕೃಷಿ ಮೂಲಸೌಕರ್ಯ ನಿಧಿಯಿಂದ ಪಿಎಂ ಕಿಸಾಸ್ ಯೋಜನೆ ಅಡಿಯಲ್ಲಿ ಪ್ರಧಾನಿ ಮೋದಿಯವರಿಂದ ಆನ್‍ಲೈವ್ ಮೂಲಕ ರೈತರಿಗೆ ನೆರವು ಬಿಡುಗಡೆ ಮಾಡಿದ್ದಾರೆ. ಈ ಯೋಜನೆ ಅಡಿಯಲ್ಲಿ ದೇಶದ 805 ಕೋಟಿ ರೈತರಿಗೆ 6ನೇ ಕಂತಿನ 17,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೃಷಿ ವಲಯದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ರೈತರ ಜೊತೆಗೆ ಸಂವಾದ ನಡೆಸಿದರು. ಸಂವಾದಕ್ಕೂ ಮುನ್ನ ಈ ಯೋಜನೆಗಳಿಗೆ ಚಾಲನೆ ನೀಡಲಾಯಿತು.

ಈ ವೇಳೆ ಮುಂದಿನ ಮೂರು ತಿಂಗಳಗಳಲ್ಲಿ ಕಾಮಗಾರಿ ಮುಗಿಯಲಿದ್ದು, ನಬಾರ್ಡ್ ಬ್ಯಾಂಕ್ ನಿಂದ 32 ಲಕ್ಷ ಸಾಲ ಪಡೆಯಲಾಗಿದೆ. ಗೋದಾಮು ಸಿದ್ಧವಾದ ಬಳಿಕ ಕೃಪಿ ಉತ್ಪನ್ನಗಳನ್ನು ಸಂಗ್ರಹಿಸಿ ಉತ್ತಮ ಬೆಲೆ ಸಿಗುವ ವೇಳೆ ಮಾರಾಟ ಮಾಡಬಹುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *