– ವಿವಿಧ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮನ
ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಒಳಗೊಂಡಂತೆ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸ್ತಿರೋ ಹೋರಾಟ ಇನ್ನಷ್ಟು ತೀವ್ರಗೊಳ್ತಿದ್ದು, ಅನ್ನದಾತರ ಹೋರಾಟಕ್ಕೆ ಇಂದು ಮತ್ತೆ ರಾಜಧಾನಿ ಬೆಂಗಳೂರು ಸಾಕ್ಷಿ ಆಗಲಿದೆ.
Advertisement
ನಿನ್ನೆ ಇಡೀ ಕರ್ನಾಟಕ ಬಂದ್ ಆಚರಿಸಿದ್ದ ರೈತ ಪರ ಸಂಘಟನೆಗಳು ಇಂದು ಬೆಂಗಳೂರಲ್ಲಿ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ರೈತರ ಪರವಾಗಿ ರೈತ ಸಂಘಟನೆಗಳ ಜೊತೆಗೆ ಇತರೆ ಸಂಘಟನೆಗಳು ಬೀದಿಗಿಳಿಯಲಿವೆ. ಮುಖ್ಯವಾಗಿ 10 ಸಾವಿರಕ್ಕೂ ಹೆಚ್ಚು ರೈತರು ಇವತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಬರುತ್ತಿರುವ ರೈತರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಆನಂದ್‍ರಾವ್ ಸರ್ಕಲ್ ಫ್ಲೈಓವರ್ ಮೂಲಕ ವಿಧಾನಸೌಧಕ್ಕೆ ಲಗ್ಗೆ ಇಡಲಿದ್ದಾರೆ.
Advertisement
Advertisement
ರೈತ ವಿರೋಧಿ ಕಾನೂನುಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕೂಡ ಬೃಹತ್ ರ್ಯಾಲಿಯ ಮೂಲಕ ಮನವಿ ಪತ್ರ ಸಲ್ಲಿಸಲಿದೆ. ಕಾರ್ಪೋರೇಷನ್ ಸರ್ಕಲ್, ವಿಧಾನಸೌಧ ಮೂಲಕ ರಾಜಭವನಕ್ಕೆ ತೆರಳಲಿದ್ದಾರೆ. ಇತ್ತ ರೈತರ ಬಾರುಕೋಲು ಚಳುವಳಿ, ವಿಧಾನಸೌಧ ಮುತ್ತಿಗೆಯನ್ನು ವಿಫಲಗೊಳಿಸಲು ಬೆಂಗಳೂರು ಪೊಲೀಸರು ಸರ್ವ ಸನ್ನದ್ಧರಾಗಿದ್ದಾರೆ.
Advertisement
ವಿಧಾನಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ಮೂರು ಕಡೆ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಸಂಗೊಳ್ಳಿರಾಯಣ್ಣ ಪ್ರತಿಮೆ, ಮೌರ್ಯ ಸರ್ಕಲ್ ಫ್ಲೈಓವರ್, ಫ್ರೀಡಂ ಪಾರ್ಕ್ ಮುಂಭಾಗದಲ್ಲಿ ಪೊಲೀಸರ ಬಂದೋಬಸ್ತ್ ಮಾಡಲಾಗ್ತಿದೆ. 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗುತ್ತದೆ ಎಂದು ಪಶ್ಚಿಮ ವಲಯ ಹೆಚ್ಚುವರಿ ಆಯುಕ್ತ ಸೌಮೇಂದು ಮುಖರ್ಜಿ ಹೇಳಿದ್ದಾರೆ.