ಲಕ್ನೋ: ದೆಹಲಿ ಗಡಿ ಭಾಗದಲ್ಲಿ ನಡೆಯುತ್ತಿರುವ ಅನ್ನದಾತರ ಪ್ರತಿಭಟನೆಯನ್ನ ಬೆಂಬಲಿಸಿ ಬಿಜೆಪಿ ನಾಯಕಿ ಪ್ರಿಯಮ್ ವಾಡ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಉತ್ತರ ಪ್ರದೇಶದ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಬಳಿಕ ಪ್ರತಿಕ್ರಿಯಿಸಿರುವ ಪ್ರಿಯಮ್ ವಾಡ್, ರೈತ ವಿರೋಧಿ ನಡೆಯೇ ತಮ್ಮ ಈ ನಿರ್ಧಾರಕ್ಕೆ ಕಾರಣ. ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಾಲ್ಕು ತಿಂಗಳಿನಿಂದ ರಸ್ತೆಯಲ್ಲಿ ಕುಳಿತಿದ್ದಾರೆ. ಆದ್ರೆ ಸರ್ಕಾರ ರೈತರ ಪ್ರತಿಭಟನೆಯನ್ನ ನಿರ್ಲಕ್ಷ್ಯದಿಂದ ಕಾಣುತ್ತಿದೆ. ಉತ್ತರ ಪ್ರದೇಶದಲ್ಲಿ ಸರ್ಕಾರ ಮಹಿಳೆಯರ ಬೇಡಿಕೆಗಳನ್ನ ಪೂರ್ಣಗೊಳಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು.
ತಮ್ಮ ರಾಜೀನಾಮೆ ಪತ್ರವನ್ನ ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ರವಾನಿಸಿದ್ದಾರೆ. ರಾಜೀನಾಮೆ ಬಳಿಕ ತಮ್ಮ ಮುಂದಿನ ನಡೆ ಏನು ಎಂಬುದರ ಬಗ್ಗೆ ಪ್ರಿಯಮ್ ವಾಡ್ ಸ್ಪಷ್ಟಪಡಿಸಿಲ್ಲ.
ಇದು ಶಾಹೀನ್ ಬಾಗ್ ಅಲ್ಲ, ರೈತರ ಆಂದೋಲನ: ರಾಕೇಶ್ ಟಿಕಾಯತ್
– ಕರ್ಫ್ಯೂ, ಲಾಕ್‍ಡೌನ್ ಬಂದ್ರೂ ಪ್ರತಿಭಟನೆ ನಿಲ್ಲಲ್ಲ https://t.co/kTDv8VgqVv#Farmers #FarmersProtest #MSP #AgricultureBill #APMCBill #KannadaNews #RakeshTikait
— PublicTV (@publictvnews) April 7, 2021