ನವದೆಹಲಿ: ಆಕ್ಸಿಜನ್ ಕೊರತೆಯಿಂದ ಚಾಮರಾಜನಗರದಲ್ಲಿ 35 ಮಂದಿ ಸಾವನ್ನಪ್ಪಿರುವ ಪ್ರಕರಣ ತನಿಖೆ ನಡೆಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ದಾಖಲಿಸಲಾಗಿದೆ. ವಿಧಾನಮಂಡಲ ನಿವೃತ್ತ ಭದ್ರತಾ ಅಧಿಕ್ಷಕ ಎಂ.ಎನ್ ಪಿಳ್ಳಪ್ಪ ದೂರು ದಾಖಲಿಸಿದ್ದಾರೆ.
Advertisement
ಚಾಮರಾಜನಗರ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಸ್ಪಷ್ಟವಾಗಿದೆ. ವರ್ಗಾವಣೆ ಹೊರತುಪಡಿಸಿ ಇನ್ಯಾವುದೇ ಕ್ರಮಗಳನ್ನು ಅಧಿಕಾರಿಗಳ ವಿರುದ್ಧ ತೆಗೆದುಕೊಂಡಿಲ್ಲ. ಈ ಪ್ರಕರಣದಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ತಪ್ಪಿಸ್ಥರಾಗಿದ್ದು, ಇತರೆ ಅಧಿಕಾರಿಗಳೊಂದಿಗಿನ ಮನಸ್ಥಾಪದ ಕಾರಣ ಈ ಘಟನೆ ನಡೆದಿದೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ – ರೋಹಿಣಿ ಸಿಂಧೂರಿಗೆ ಕ್ಲೀನ್‍ಚಿಟ್
Advertisement
Advertisement
ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮ ಈಜುಕೊಳ ನಿರ್ಮಾಣ, ತಿರುಪತಿಯಲ್ಲಿದ್ದ ಮೈಸೂರು ಮಹಾರಾಜರ ಭೂಮಿ ಆಂಧ್ರಪ್ರದೇಶ ಸರ್ಕಾರಕ್ಕೆ ಹಸ್ತಾಂತರ ಸೇರಿ ಹಲವು ಆರೋಪಗಳಿವೆ. ಅವುಗಳ ಬಗ್ಗೆಯೂ ತನಿಖೆಯಾಗಬೇಕಿದ್ದು, ಕೂಡಲೇ ಅವರನ್ನು ಅಮಾನತು ಮಾಡಿ ತನಿಖೆ ಮಾಡಬೇಕು ಎಂದು ಎಂ.ಎನ್ ಪಿಳ್ಳಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ – ತಾಳಿ ಉಳಿಸಿಕೊಡಿ ಅಂತ ಅಂಗಲಾಚಿದ ನವ ವಧು