– ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಿ ಎಡವಟ್ಟು ಮಾಡಿದ ಆರೋಗ್ಯ ಇಲಾಖೆ
ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ವರದಿ ಬರುವ ಮುನ್ನವೆ ಮೃತಪಟ್ಟ ವ್ಯಕ್ತಿಯ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಿ ಆರೋಗ್ಯ ಇಲಾಖೆ ಎಡವಟ್ಟು ಮಾಡಿದೆ.
ಮೃತ ವ್ಯಕ್ತಿಯ ಶವ ಪಡೆದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿ ಮೇಲೆ ಮೃತವ್ಯಕ್ತಿಗೆ ಕೊರೊನಾ ಪಾಸಿಟಿವ್ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 60ಕ್ಕೂ ಹೆಚ್ಚು ಮಂದಿಯಲ್ಲಿ ಆತಂಕ ಶುರುವಾಗಿದೆ. ಯಳಂದೂರು ಬಳೇಪೇಟೆ ವರ್ಷದ ವೃದ್ಧರೊಬ್ಬರಿಗೆ ಗ್ಯಾಂಗ್ರಿನ್ ಆಗಿತ್ತು. ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಲು ಬಂದಾಗ ಅವರಿಗೆ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಲಾಗಿತ್ತು. ವರದಿ ನೆಗೆಟಿವ್ ಬಂದಿತ್ತು. ನಂತರ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು.
Advertisement
Advertisement
ಆದರೆ ಅವರಿಗೆ ಕೋವಿಡ್-19 ಲಕ್ಷಣಗಳು ಕಂಡು ಬಂದಿದ್ದರಿಂದ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ವರದಿ ಬರುವ ಮುಂಚಯೇ ಅವರು ಮೃತಪಟ್ಟಿದ್ದರು. ಈ ವೇಳೆ ಎಡವಟ್ಟು ಮಾಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ವರದಿ ಬರುವವರೆಗೂ ಕಾಯದೆ ಮೃತ ವ್ಯಕ್ತಿಯ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. ಶವವನ್ನು ಯಳಂದೂರಿಗೆ ತೆಗೆದುಕೊಂಡು ಹೋದ ಸಂಬಂಧಿಕರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಇದೇ ವೇಳೆ ವರದಿ ಬಂದಿದ್ದು ಮೃತವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ.
Advertisement
Advertisement
ಈ ವಿಷಯ ತಿಳಿಯುವುದರೊಳಗೆ ಅಂತ್ಯಕ್ರಿಯೆ ಪೂರ್ಣ ಗೊಂಡಿತ್ತು. ಕೊರೊನಾ ಪಾಸಿಟಿವ್ ಸುದ್ದಿ ಕೇಳಿ ಮೃತನ ಕುಟುಂಬಸ್ಥರಲ್ಲಿ ಹಾಗೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡವರಲ್ಲಿ ಆತಂಕ ಶುರುವಾಗಿದೆ. ಇದೀಗ ಆರೋಗ್ಯ ಇಲಾಖೆ ಯಳಂದೂರಿನ ಬಳೇಪೇಟೆ ಪ್ರದೇಶಕ್ಕೆ ಸೋಂಕುನಿವಾರಕ ದ್ರಾವಣ ಸಿಂಪಡಿಸಿ ಸೀಲ್‍ಡೌನ್ ಮಾಡಿದ್ದಾರೆ. ಜೊತೆಗೆ ಇಲ್ಲಿನ ನಿವಾಸಿಗಳ ಕೊರೊನಾ ಟೆಸ್ಟ್ ಗೆ ಮುಂದಾಗಿದೆ.