ಮುಂಬೈ: ಶ್ರೀಲಂಕಾ ವಿರುದ್ಧ ನಿಗದಿತ ಓವರ್‍ಗಳ ಪಂದ್ಯಾಟಕ್ಕೆ ಭಾರತ ತಂಡ ಪ್ರಕಟವಾಗಿದೆ. ತಂಡವನ್ನು ಆರಂಭಿಕ ಆಟಗಾರ ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಇಬ್ಬರು ಕನ್ನಡಿಗರಾದ ಮನೀಶ್ ಪಾಂಡೆ, ಕೆ.ಗೌತಮ್ ಮತ್ತು ದೇವದತ್ ಪಡಿಕ್ಕಲ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
Advertisement
ಮುಂಬರುವ ಜುಲೈ ತಿಂಗಳಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಇತರೆ ಹಿರಿಯ ಆಟಾಗರರು ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದ ಹೊಸ ಪ್ರತಿಭೆಗಳನ್ನೊಳಗೊಂಡ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡವನ್ನು ಪ್ರಕಟಿಸಿದೆ. ಅನುಭವಿ ಆಟಗಾರ ಶಿಖರ್ ಧವನ್ ಗೆ ತಂಡದ ನಾಯಕತ್ವ ನೀಡಲಾಗಿದೆ. ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ. ಇದನ್ನೂ ಓದಿ:ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್!
Advertisement
Advertisement
ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಲಂಕಾ ಪ್ರವಾಸಕ್ಕೆ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಐಪಿಎಲ್‍ನಲ್ಲಿ ಅಬ್ಬರಿಸಿದ್ದ ಯುವ ಬ್ಯಾಟ್ಸ್‌ಮ್ಯಾನ್ ಗಳಾದ ದೇವದತ್ ಪಡಿಕ್ಕಲ್ ಮತ್ತು ಋತುರಾಜ್ ಗಾಯಕ್ವಾಡ್ ತಂಡ ಸೇರಿಕೊಂಡಿದ್ದಾರೆ. ಐಪಿಎಲ್‍ನಲ್ಲಿ ಅಬ್ಬರದ ಬ್ಯಾಟಿಂಗ್‍ಗೆ ಹೆಸರುವಾಸಿಯಾದ ಎಡಗೈ ಬ್ಯಾಟ್ಸ್‌ಮ್ಯಾನ್ ನಿತೀಶ್ ರಾಣಾ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. 2 ಜೋಡಿ ಸಹೋದರರಾದ ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ ಮತ್ತು ದೀಪಕ್ ಚಹರ್, ರಾಹುಲ್ ಚಹರ್, ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆ ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್‍ಗೆ ಪಾದಾರ್ಪಣೆ ಮಾಡಿದ್ದ ಎಡಗೈ ವೇಗದ ಬೌಲರ್ ಚೇತನ್ ಸಕಾರಿಯಾ ತಂಡಕ್ಕೆ ಆಯ್ಕೆಯಾಗಿದ್ದು, ಈ ಮೂಲಕ ಭಾರತ ತಂಡದ ಪರ ಆಡುವ ಅವಕಾಶ ಸಿಕ್ಕಂತಾಗಿದೆ. ಆಲ್‍ರೌಂಡರ್ ಕೃಷ್ಣಪ್ಪ ಗೌತಮ್, ಸ್ಪಿನ್ನರ್ ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ವೇಗಿ ನವದೀಪ್ ಸೈನಿ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: 2007ರ ಟಿ20ಗೆ ನಾನು ನಾಯಕನಾಗುವ ನಿರೀಕ್ಷೆ ಹೊಂದಿದ್ದೆ, ಆದರೆ ಧೋನಿ ಆಯ್ಕೆಯಾದ್ರು – ಯುವಿ
Advertisement
ಶ್ರೀ ಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಮತ್ತು 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಕೊರೊನಾ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಪಂದ್ಯಗಳನ್ನು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕದಿನ ಪಂದ್ಯಗಳು ಜುಲೈ 13, 16 ಮತ್ತು 18 ರಂದು ನಡೆಯಲಿದ್ದು, ಟಿ20 ಪಂದ್ಯಗಳು ಜುಲೈ 21, 23 ಮತ್ತು 25 ರಂದು ನಡೆಯಲಿದೆ. ಇದನ್ನೂ ಓದಿ: ಕೊಹ್ಲಿಗೆ ಓರ್ವ ನ್ಯೂಜಿಲೆಂಡ್ ಬೌಲರ್‌ನಿಂದ ಕಂಟಕವಿದೆ ಎಂದ ಬಾಲ್ಯದ ಕೋಚ್
???? NEWS ????: The All-India Senior Selection Committee picked the Indian squad for the 3-match ODI series & the 3-match T20I series against Sri Lanka in July. #TeamIndia
Details ???? https://t.co/b8kffqa6DR pic.twitter.com/GPGKYLMpMS
— BCCI (@BCCI) June 10, 2021
ಭಾರತ ತಂಡ
ಶಿಖರ್ ಧವನ್ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಪೃಥ್ವಿ ಶಾ, ದೇವದತ್ತ್ ಪಡಿಕ್ಕಲ್, ಋತುರಾಜ್ ಗಾಯಕ್ವಡ್,ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಜುವೇಂದ್ರ ಚಹಲ್, ರಾಹುಲ್ ಚಹರ್, ದೀಪಕ್ ಚಹರ್, ಕೆ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ನವದೀಪ್ ಸೈನಿ, ಚೇತನ್ ಸಕರಿಯಾ
ನೆಟ್ ಬೌಲರ್
ಅರ್ಷ್‍ದೀಪ್ ಸಿಂಗ್, ಸಾಯಿ ಕಿಶೋರ್, ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಸಿಮಾರ್ಜೀತ್ ಸಿಂಗ್ ಆಯ್ಕೆಯಾಗಿದ್ದಾರೆ.