ಮಡಿಕೇರಿ: ಸಿಬ್ಬಂದಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಗೃಹರಕ್ಷಕ ದಳದ ಅಧಿಕಾರಿಯೊಬ್ಬರನ್ನು ಭ್ರಷ್ಟಾಚಾರ ನಿಗ್ರಹದಳದ ಎಸಿಬಿ ಅಧಿಕಾರಿಗಳು ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ಸು ನಿಲ್ದಾಣದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸುನಿಲ್ ಎಂಬವರಿಂದ ಲಂಚ ಪಡೆಯುತ್ತಿದ್ದ ಆರೋಪದಡಿ ಗೃಹ ರಕ್ಷಕ ದಳದ ಅಧಿಕಾರಿ ರುದ್ರಪ್ಪ ಎಂಬವರನ್ನು ಬಂಧಿಸಲಾಗಿದೆ.
ಪ್ರತಿ ತಿಂಗಳು ಗೃಹರಕ್ಷಕ ದಳದ ಸಿಬ್ಬಂದಿ ತಲಾ ಒಂದು ಸಾವಿರ ರೂ.ಗಳನ್ನು ನೀಡಬೇಕೆಂಬ ಬೇಡಿಕೆಯನ್ನು ರುದ್ರಪ್ಪ ಬಳಿ ಇಟ್ಟಿದ್ದಾರೆ ಎನ್ನಲಾಗಿದ್ದು, ತಪ್ಪಿದಲ್ಲಿ ಬೇರೆಕಡೆಗೆ ಕಳುಹಿಸುವುದಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳವನ್ನು ಸಿಬ್ಬಂದಿಗೆ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬರುತ್ತಿತ್ತು.
ಅದರಂತೆ ಇಂದು ಸೋಮವಾರಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ಸಿಬ್ಬಂದಿ ಸುನಿಲ್ ಎಂಬವರಿಂದ ಒಂದು ಸಾವಿರ ರೂ.ಗಳನ್ನು ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಎಸಿಬಿ ಇನ್ಸ್ ಪೆಕ್ಟರ್ ಶ್ರೀಧರ್ ನೇತೃತ್ವದ ತಂಡ ದಾಳಿ ನಡೆಸಿ ರುದ್ರಪ್ಪ ಅವರನ್ನು ವಶಕ್ಕೆ ಪಡೆದಿದ್ದಾರೆ.