ಬೆಳಗಾವಿ: ಲಸಿಕೆ ಜೊತೆಗೆ ಆಹಾರ ಮತ್ತು ಜೀವನ ಪದ್ಧತಿ ಬದಲಿಸಿಕೊಳ್ಳಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.
ಮಣ್ಣೂರು ಗ್ರಾಮದಲ್ಲಿ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ಕೊರೊನಾ ಹೊಡೆದೋಡಿಸಲು ಲಸಿಕೆ ಹಾಕಿಸಿಕೊಳ್ಳುವ ಜೊತೆಗೆ ಮುಂದಿನ ದಿನಗಳಲ್ಲಿ ನಾವು ನಮ್ಮ ಆಹಾರ ಮತ್ತು ಜೀವನ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುಬೇಕು. ನಿರಂತರವಾಗಿ ರೋಗಗಳ ವಿರುದ್ಧ ಹೋರಾಡುವಂತೆ ನಮ್ಮ ದೇಹವನ್ನು ಸಿದ್ಧಪಡಿಸಿಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: ನಿಕ್‍ಗೆ ಸಾರ್ವಜನಿಕ ಸ್ಥಳದಲ್ಲಿಯೇ ಕಿಸ್ ಕೊಟ್ಟ ಪ್ರಿಯಾಂಕಾ
ಕೋವಿಡ್ ಲಸಿಕೆ ಇಂದು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಸಧ್ಯದ ಪರಿಸ್ಥಿತಿಯಲ್ಲಿ ಕೊರೊನಾ ವಿರುದ್ಧದ ಹೋರಾಟಕ್ಕೆ ಬೇರೆ ದಾರಿ ಇಲ್ಲ. ಹೀಗಾಗಿ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಜೊತೆಗೆ ಮುಂದಿನ ದಿನಗಳಲ್ಲಿ ನಾವು ತಜ್ಞರ ಸಲಹೆ ಪಡೆದುಕೊಂಡು ನಮ್ಮ ಜೀವನ ಶೈಲಿಯನ್ನೇ ಬದಲಾಯಿಸಿಕೊಳ್ಳಬೇಕು. ಆಹಾರ ಪದ್ಧತಿಯಲ್ಲೂ ಸುಧಾರಣೆ ಮಾಡಿಕೊಳ್ಳಬೇಕು. ಎಂದು ಸಲಹೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನ ಪ್ರತಿನಿಧಿಗಳು, ಮೃಣಾಲ ಲಕ್ಷ್ಮಿ ಹೆಬ್ಬಾಳ್ಕರ್, ಪಕ್ಷದ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.