ಬೆಂಗಳೂರು: ರಾಜ್ಯದಲ್ಲಿ ಲಸಿಕೆ ಕೊರತೆ ನೀಗಿಸಲು ಮುಂದಿನ ವಾರ ದೆಹಲಿಗೆ ತೆರಳಿದ ಕೇಂದ್ರ ಆರೋಗ್ಯ ಸಚಿವರನ್ನ ಭೇಟಿ ಮಾಡಿ ಲಸಿಕೆ ಹೆಚ್ಚಾಗಿ ನೀಡಲು ಮನವಿ ಮಾಡುತ್ತೇನೆ ಅಂತ ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.
Advertisement
ರಾಜ್ಯದಲ್ಲಿ ಲಸಿಕೆ ಕೊರತೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಲಸಿಕೆ ಬರುತ್ತಿದೆ, ಈ ತಿಂಗಳು ಹೆಚ್ಚಾಗಿ ಲಸಿಕೆ ಬರಬೇಕಿತ್ತು. ಆದರೆ ಲಸಿಕೆ ಬರೋದು ತಡವಾಗಿದೆ. ಲಸಿಕೆ ಪೂರೈಕೆ ಹೆಚ್ಚಳ ಮಾಡುವಂತೆ ಮನವಿ ಮಾಡಲು ಸೋಮವಾರ ಅಥವಾ ಮಂಗಳವಾರ ದೆಹಲಿಗೆ ತೆರಳುತ್ತೇನೆ. ಕೇಂದ್ರ ಆರೋಗ್ಯ ಸಚಿವರನ್ನ ಭೇಟಿಯಾಗಿ ರಾಜ್ಯಕ್ಕೆ ಹೆಚ್ಚು ಲಸಿಕೆ ಪೂರೈಕೆ ಮಾಡುವಂತೆ ಮನವಿ ಮಾಡುತ್ತೇನೆ ಅಂತ ತಿಳಿಸಿದರು. ಇದನ್ನೂ ಓದಿ: ಸಂಚಾರಿ ವಿಜಯ್‍ಗೆ ಗೌರವ ಸಲ್ಲಿಸಿದ ಅಮೆರಿಕದ ಫ್ರಾಂಕ್ಲಿನ್ ಥಿಯೇಟರ್
Advertisement
Advertisement
ಕಾಂಗ್ರೆಸ್ ಸಿಎಂ ಕಿತ್ತಾಟಕ್ಕೆ ಪ್ರತಿಕ್ರಿಯೆ ನೀಡೊಲ್ಲ:
ಇದೇ ವೇಳೆ ಕಾಂಗ್ರೆಸ್‍ನಲ್ಲಿ ಶುರುವಾಗಿರೋ ಸಿಎಂ ಮತ್ತು ದಲಿತ ಸಿಎಂ ಕಿತ್ತಾಟದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು ಸುಧಾಕರ್, ಕಾಂಗ್ರೆಸ್ ಬಗ್ಗೆ ನಾನು ಮಾತಾಡೊಲ್ಲ. ಸಾಮಾನ್ಯ ಪದ್ದತಿಯಲ್ಲಿ ಕಾಂಗ್ರೆಸ್‍ನಲ್ಲಿ ಪಕ್ಷದ ಅಧ್ಯಕ್ಷರು ಅಥವಾ ಸಿಎಲ್ಪಿ ಲೀಡರ್‍ಗಳು ಸಿಎಂ ಆಗುತ್ತಾರೆ. ಇವೆರೆಡು ಪ್ರತೀತಿ ಕಾಂಗ್ರೆಸ್‍ನಲ್ಲಿ ನಡೆದುಕೊಂಡು ಬಂದಿದೆ. ಕಾಂಗ್ರೆಸ್‍ನಲ್ಲಿ ನಡೆದುಕೊಂಡ ಬಂದಿರೋ ಪದ್ದತಿ ಇದಾಗಿದೆ ಎಂದು ಹೇಳಿದ್ದಾರೆ.