ಹುಬ್ಬಳ್ಳಿ: ಲಾಕ್‍ಡೌನ್ ಘೋಷಣೆಯಾದ ವೇಳೆ ಅನೈತಿಕ ಸಂಬಂಧಕ್ಕೆ ಅಡ್ಡಿ ಉಂಟಾದ ಪರಿಣಾಮ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಬಳಿಕ ಶವವನ್ನು ರೈಲ್ವೇ ಹಳಿಯ ಮೇಲೆ ಬಿಸಾಕಿದ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಚಂದ್ರಪ್ಪ ಲಮಾಣಿ ಕೊಲೆಯಾದ ವ್ಯಕ್ತಿ. ಇವರನ್ನು ಪತ್ನಿ ಶೋಭಾ ಚಂದ್ರಪ್ಪ ಲಮಾಣಿ ಹಾಗೂ ಆಕೆಯ ಪ್ರಿಯಕರ ದಿಳ್ಳೆಪ್ಪ ಯಮನಪ್ಪ ಅಂತರವಳ್ಳಿ ಕೊಲೆ ಮಾಡಿದ್ದಾರೆ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.
Advertisement
Advertisement
ಚಂದ್ರಪ್ಪ ಮೂಲತಃ ಶ್ರೀನಿವಾಸಪೂರದ ಗಂಗಾಜಲ ತಾಂಡದ ನಿವಾಸಿಯಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಪತ್ನಿ ದಿಳ್ಳೆಪ್ಪ ಎಂಬವನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಲಾಕ್ ಡೌನ್ ಘೋಷಣೆಯಾದ ಸಂದರ್ಭದಲ್ಲಿ ಅನೈತಿಕ ಸಂಬಂಧಕ್ಕೆ ತೊಂದರೆಯಾಗಿದೆ. ಹೀಗಾಗಿ ಪತ್ನಿ, ಆಕೆಯ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಾರೆ. ಅಪ್ರಾಪ್ತ ಬಾಲಕನೊಬ್ಬ ಕೂಡ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.
Advertisement
ರಾಣೆಬೆನ್ನೂರು ರೈಲ್ವೇ ನಿಲ್ದಾಣದ ಹತ್ತಿರ ಚಂದ್ರಪ್ಪನ ಶವ ದೊರೆತಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ರೈಲ್ವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ರೈಲ್ವೆ ಸಿಪಿಐ ಜೆ ಎಂಕಾಲಿಮಿರ್ಚಿ ನೇತೃತ್ವದಲ್ಲಿ ರೈಲ್ವೆ ಪೊಲೀಸರು ಆರೋಪಿಗಳನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.