ಮಡಿಕೇರಿ: ಕೊರೊನಾ ಲಾಕ್‍ಡೌನ್‍ನಿಂದಾಗಿ ಪ್ರವಾಸಿಗರ ತಾಣವಾಗಿರುವ ಕೊಡಗು ಜಿಲ್ಲೆಗೆ ಪ್ರವಾಸಿಗರು ಭೇಟಿ ನೀಡದೇ ಹಿನ್ನೆಲೆ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.
Advertisement
ದಕ್ಷಿಣ ಕಾಶ್ಮೀರ, ಭಾರತದ ಸ್ಕಾಟ್‍ಲ್ಯಾಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಕೊಡಗು ಜಿಲ್ಲೆಯಲ್ಲಿ ಹತ್ತಾರು ಪ್ರವಾಸಿ ತಾಣಗಳಿದೆ. ಇಲ್ಲಿನ ಪ್ರಾಕೃತಿಕ ಸೌಂದರ್ಯ ರಾಜ್ಯದ ಪ್ರವಾಸಿಗರೇ ಅಷ್ಟೇ ಅಲ್ಲ ದೇಶ, ವಿದೇಶದ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಪ್ರವಾಸಿಗರ ಹಾಟ್ ಸ್ಪಾಟ್ ಎನಿಸಿರುವ ಮಂಜಿನನಗರಿ ಮಡಿಕೇರಿಯಲ್ಲಿರುವ ರಾಜಾಸೀಟನ ಸೌಂದರ್ಯಕ್ಕೆ ಮರುಳಾಗದವರಿಲ್ಲ. ಮೋಡವೇ ಧರೆಗಿಳಿವ ಮುಗಿಲು ಪೇಟೆ ಎಂದು ಹೆಸರಾದ ಮಾಂದಲಪಟ್ಟಿ, ಧುಮ್ಮುಕ್ಕಿ ಹರಿವ ಅಬ್ಬಿಜಲಪಾತ ಹೀಗೆ ಸಾಲು ಸಾಲು ಪ್ರವಾಸಿ ತಾಣಗಳು ನೋಡುಗರ ಕಣ್ಮನ ಸೆಳೆಯುತ್ತವೆ. ಆದರೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಈ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಪ್ರವಾಸಿಗರು ಬರದೇ ಇರುವ ಕಾರಣ ಕೊಡಗು ಜಿಲ್ಲೆಯ ಪ್ರವಾಸೋದ್ಯಮಕ್ಕೆ ನೂರಾರು ಕೋಟಿ ನಷ್ಟ ಆಗಿದೆ. ಇದನ್ನೂ ಓದಿ:ವೀಕೆಂಡ್ ಕರ್ಫ್ಯೂ ಇರಲ್ಲ, ಸಭೆ ಸಮಾರಂಭಕ್ಕೆ ಅವಕಾಶವಿಲ್ಲ – ಲಾಕ್‍ಡೌನ್ ಇನ್ನಷ್ಟು ಸಡಿಲ
Advertisement
Advertisement
ಕೊಡಗು ಜಿಲ್ಲೆಯಲ್ಲಿರುವ 300ಕ್ಕೂ ಹೆಚ್ಚು ರೆಸಾರ್ಟ್, 500ಕ್ಕೂ ಹೆಚ್ಚು ಹೋಟೆಲ್ ಮತ್ತು 3000 ಕ್ಕೂ ಹೆಚ್ಚು ಹೋಂಸ್ಟೇಗಳು ಸಾವಿರಾರು ಪ್ರವಾಸಿಗರಿಗೆ ಊಟ ವಸತಿಯೊಂದಿಗೆ ವಿಶೇಷ ಆತಿಥ್ಯ ನೀಡುವ ಮೂಲಕ ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದ್ದವು. ಅಲ್ಲದೇ ಪ್ರವಾಸಿ ತಾಣಗಳ ಎಂಟ್ರಿ ಫೀಜ್ ಗಾಗಿ ಪ್ರವಾಸೋದ್ಯಮ ಇಲಾಖೆ ಸಂಗ್ರಹಿಸುತ್ತಿದ್ದ ಶುಲ್ಕವೇ ಸರ್ಕಾರಕ್ಕೆ ಹತ್ತಾರು ಲಕ್ಷ ರೂಪಾಯಿ ಆದಾಯ ತಂದುಕೊಡುತಿತ್ತು. ಆದರೆ ಜಿಲ್ಲೆಯಲ್ಲಿ ಲಾಕ್‍ಡೌನ್ ಆದ ಪರಿಣಾಮ ಎಲ್ಲಾ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೇ ಬಣಗುಡುತ್ತಿವೆ. ಹೋಂ ಸ್ಟೆ, ರೆಸಾರ್ಟ್, ಹೊಟೇಲ್ ಗಳು ಖಾಲಿ ಖಾಲಿ ಹೊಡೆಯುತ್ತಿವೆ. ಎಲ್ಲವೂ ಬಂದ್ ಆಗಿದ್ದರಿಂದ ಕೊಡಗಿನ ಆರ್ಥಿಕತೆಗೆ ಮೂರು ತಿಂಗಳಲ್ಲಿ ಕನಿಷ್ಠ 250 ಕೋಟಿ ನಷ್ಟವಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಈಶ್ವರ್ ಕುಮಾರ್ ಖಂಡು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೊರಗಿನವರಿಗಿಲ್ಲ ಬ್ರೇಕ್ – ಕೊಡಗಿನಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ
Advertisement
ಮತ್ತೊಂದೆಡೆ ಪ್ರವಾಸೋದ್ಯಮವನ್ನೇ ನಂಬಿ ಬದುಕುತ್ತಿದ್ದ ಸಾವಿರಾರು ಕುಟುಂಬಗಳು ಇಂದು ದಿಕ್ಕು ತೋಚದಂತೆ ಕಂಗಾಲಾಗಿವೆ. ಹೋಟೆಲ್, ರೆಸಾರ್ಟ್ ಮತ್ತು ಹೋಂಸ್ಟೇಗಳಲ್ಲಿ ವಿವಿಧ ಕೆಲಸಗಳನ್ನು ಮಾಡುತ್ತಾ ಜೀವನ ಕಂಡುಕೊಂಡಿದ್ದವರು ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಇನ್ನು ಹೊಟೇಲ್, ರೆಸಾರ್ಟ್ ಮತ್ತು ಹೋಂಸ್ಟೇಗಳ ಮಾಲೀಕರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಮೂರೂವರೆ ತಿಂಗಳಿಂದ ಬೆಡ್ಡು, ಬೆಡ್ ಕವರ್ ಸೇರಿದಂತೆ ಯಾವುದನ್ನು ಬಳಸದೇ ಎಲ್ಲವೂ ಕೊಡಗಿನ ಪರಿಸರದಲ್ಲಿ ಬೂಸ್ಟ್ ಹಿಡಿದು ಹಾಳಾಗಿವೆ. ಇವುಗಳನ್ನು ಮತ್ತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹೊಸದಾಗಿ ಎಲ್ಲವನ್ನೂ ಕೊಂಡುಕೊಳ್ಳಬೇಕಾದ ಸ್ಥಿತಿ ಇದೆ ಎಂದು ಹೋಂಸ್ಟೇ ಮಾಲೀಕರ ಅಳಲು ತೊಡಿಕೊಂಡಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಜುಲೈ 5ರ ಬಳಿಕವೂ ಅನ್‍ಲಾಕ್ ಡೌಟ್- ಬೋಪಯ್ಯ ಸುಳಿವು
ಜಿಲ್ಲೆಗೆ ಬರುತ್ತಿದ್ದ ಸಾವಿರಾರು ಪ್ರವಾಸಿಗರ ನಂಬಿ ನೂರಾರು ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಬದುಕು ಕಟ್ಟಿಕೊಂಡಿದ್ದರು. ಈಗ ಅವರ ಬದುಕು ಕೂಡ ಬೀದಿಗೆ ಬಂದಿದೆ. ಒಟ್ಟಿನಲ್ಲಿ ಪ್ರವಾಸೋದ್ಯಮ ಬಂದ್ ಆಗಿದ್ದರಿಂದ ಜಿಲ್ಲೆಯಲ್ಲಿ 250 ಕೋಟಿಯಷ್ಟು ವಹಿವಾಟು ನಷ್ಟವಾಗಿದ್ದು, ಸಾವಿರಾರು ಕುಟುಂಬಗಳು ಬದುಕಿನ ಅತಂತ್ರ ಸ್ಥಿತಿ ಅನುಭವಿಸುತ್ತಿವೆ. ಇದನ್ನೂ ಓದಿ:ಕೊಡಗಿನಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್ ಮುಂದುವರಿಕೆ ಸುಳಿವು ನೀಡಿದ ಡಿಸಿ