– ಶಿಕ್ಷಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಎಸ್‍ಎಸ್‍ಎಲ್ ಬೋರ್ಡ್
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಎಸ್‍ಎಸ್‍ಎಲ್‍ಸಿ ಮೌಲ್ಯಮಾನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಲಾಕ್‍ಡೌನ್ ನಡುವೆಯೇ ಅಂದರೆ ನಾಳೆಯಿಂದಲೇ ಮೌಲ್ಯಮಾಪನ ಪ್ರಾರಂಭವಾಗಲಿದೆ.
ಈಗಾಗಲೇ ಶಿಕ್ಷಕರು, ಡಿಡಿಪಿಐ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷ ಮಂಡಳಿಯಿಂದ ನೋಟಿಸ್ ನೀಡಲಾಗಿದ್ದು, ನಾಳೆಯಿಂದಲೇ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಲಾಕ್‍ಡೌನ್ ನಡುವೆಯೇ ನಾಳೆಯಿಂದ ಮೌಲ್ಯಮಾಪನ ಪ್ರಾರಂಭವಾಗಲಿದ್ದು, ಮೌಲ್ಯಮಾಪನಕ್ಕೆ ವಿನಾಯಿತಿ ನೀಡಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಲಾಕ್‍ಡೌನ್ ಜಾರಿಯಲ್ಲಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ನಾಳೆಯಿಂದ ಮೌಲ್ಯಮಾಪನ ನಡೆಯಲಿದೆ. ಎಲ್ಲ ಶಿಕ್ಷಕರು, ಅಧಿಕಾರಿಗಳಿಗೆ ಈ ಕುರಿತು ಎಸ್‍ಎಸ್‍ಎಲ್ಸಿ ಬೋರ್ಡ್ ನಿರ್ದೇಶಕಿ ಎಂ.ಕನಗವಲ್ಲಿ ಸೂಚನೆ ನೀಡಿದ್ದು, ಮೌಲ್ಯಮಾಪನಕ್ಕೆ ಹಾಜರಾಗುವ ಎಲ್ಲ ಶಿಕ್ಷಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವುದಾಗಿಯೂ ತಿಳಿಸಿದ್ದಾರೆ. ಡಿಡಿಪಿಐಗಳು ಮತ್ತು ಬಿಇಓಗಳು ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಲಾಗಿದೆ.
ಮೌಲ್ಯಮಾಪನಕ್ಕೆ ಆಗಮಿಸುವ ಶಿಕ್ಷಕರಿಗೆ ಪಿಕ್ ಅಪ್ ಮತ್ತು ಡ್ರಾಪ್ ವ್ಯವಸ್ಥೆ ಮಾಡಲು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿ ಸೂಚನೆ ನೀಡಿದೆ. ಅಲ್ಲದೆ ಶಿಕ್ಷಕರ ಸಾರಿಗೆ ವ್ಯವಸ್ಥೆ ಜವಾಬ್ದಾರಿಯನ್ನು ಡಿಡಿಪಿಐಗಳು ಮತ್ತು ಬಿಇಓಗಳಿಗೆ ವಹಿಸಲಾಗಿದೆ.