ನವದೆಹಲಿ: ಜಿಲ್ಲೆಗೆ ಅನುಗುಣವಾಗುವಂತೆ ಕ್ರಮ ಕೈಗೊಳ್ಳಿ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಲಾಕ್ ಡೌನ್ ಸಂಬಂಧ ಸಂಪೂರ್ಣ ಅಧಿಕಾರವನ್ನು ಡಿಸಿಗಳ ಹೆಗಲಿಗೆ ಹಾಕಿದ್ದಾರೆ.
You all are playing a very important role in the battle against Corona. In a way, you are the field commanders of this battle: PM Narendra Modi interacts with district and state officials on the #COVID19 situation. pic.twitter.com/HX5gxuwYVU
— ANI (@ANI) May 18, 2021
Advertisement
ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ, ಲಾಕ್ ಡೌನ್ ನಿರ್ಧಾರವನ್ನು ಜಿಲ್ಲಾಡಳಿತದ ಹೆಗಲಿಗೆ ವಹಿಸಿದ್ದಾರೆ. ಜಿಲ್ಲೆಯ ಸ್ಥಿತಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.
Advertisement
ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿರುತ್ತೆ. ಹೀಗಾಗಿ ಜಿಲ್ಲೆಗೆ ಅನುಗುಣವಾಗಿ ನೀವೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಮೋದಿ ತಿಳಿಸಿದ್ದಾರೆ. ಇದನ್ನು ಓದಿ: ಜಿಲ್ಲೆಯಲ್ಲಿ ಕಮಾಂಡರ್‌ನಂತೆ ಕೆಲಸ ಮಾಡಿ – ಡಿಸಿಗಳಿಗೆ ಸೂಚನೆ
Advertisement
In the battle against this virus, our weapons are local containment zone, aggressive testing and sending correct and complete information to the people: PM Modi pic.twitter.com/2NkUiPhEer
— ANI (@ANI) May 18, 2021
Advertisement
ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಇಡೀ ದೇಶ ಗೆದ್ದಂತೆ. ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. ಈಗಾಗಲೇ ಹಲವು ಅಧಿಕಾರಿಗಳು ತಮ್ಮ ಆಪ್ತರನ್ನು ಕಳೆದುಕೊಂಡಿದ್ದಾರೆ ಎಂದರು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಮೈಸೂರು, ಕೋಲಾರ, ಮಂಡ್ಯ, ತುಮಕೂರು, ಕೊಡಗು, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ ಮೊದಲಾದ ಜಿಲ್ಲೆಗಳ ಡಿಸಿಗಳ ಜೊತೆ ಪಿಎಂ ಇಂದು ಸಂವಾದ ನಡೆಸಿದರು.