ಲಾಕ್‍ಡೌನ್ ವೇಳೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ

Public TV
1 Min Read
ygr liqour

– ಜಾಣ ಕುರುಡತನ ತೋರುತ್ತಿರುವ ಪೊಲೀಸರು, ಅಬಕಾರಿ ಇಲಾಖೆ

ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ರುದ್ರ ತಾಂಡವಾಡುತ್ತಿದೆ. ಸೋಂಕಿತರ ಸಂಖ್ಯೆ 1,300ರ ಗಡಿದಾಟುತ್ತಿದೆ. ನಿಯಂತ್ರಣಕ್ಕೆ ಮಾಡುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾಡಳಿತ ಮತ್ತು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಆದರೆ ಇನ್ನೊಂದೆಡೆ ಅಕ್ರಮ ಮದ್ಯ ಮಾರಾಟದ ಮೂಲಕ ಅವರ ಕೆಲಸಕ್ಕೆ ಬೆಲೆಯೇ ಇಲ್ಲದಂತೆ ಕೆಲ ಕಿಡಿಗೇಡಿಗಳು ಮಾಡುತ್ತಿದ್ದಾರೆ.

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಂಜೆ 5ರ ನಂತರ ಎಲ್ಲ ರೀತಿಯ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಿದ್ದರೂ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾತ್ರ ಎಗ್ಗಿಲ್ಲದೆ ನಡೆಯುತ್ತಿದೆ. ಸಂಜೆ 5 ನಂತರ ಮದ್ಯ ಮಾರಾಟಕ್ಕೆ ನಿಷೇಧವಿದ್ದರೂ, ಗ್ರಾಮೀಣ ಭಾಗದಲ್ಲಿ ಕಳ್ಳ ಮಾರ್ಗದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ.

vlcsnap 2020 07 12 22h54m38s105 e1594574868637

ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯ ಶ್ರೀನಿವಾಸ ಬಾರ್ ಮತ್ತು ರೆಸ್ಟೋರೆಂಟ್‍ನಲ್ಲಿ ಸಂಜೆ 5 ಗಂಟೆ ಬಳಿಕ ಕುಡುಕರ ಸಾಮ್ರಾಜ್ಯ ತೆರೆದುಕೊಳ್ಳುತ್ತದೆ. ಯಾವುದೇ ಸಾಮಾಜಿಕ ಅಂತರವಿಲ್ಲದೆ, ಮಾಸ್ಕ್ ಧರಿಸಿದೆ ಮದ್ಯ ಖರೀದಿಸಿ ಅಲ್ಲಿಯೇ ಕುಡಿಯುತ್ತಿದ್ದಾರೆ. ಈ ವಿಷಯ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ತಿಳಿದಿದ್ದರೂ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *