ಲಾರಿ, ಟ್ರ್ಯಾಕ್ಟರ್ ಮಧ್ಯೆ ಅಪಘಾತ- ಸ್ಥಳದಲ್ಲೇ ಓರ್ವ ಸಾವು

Public TV
0 Min Read
rcr accident

ರಾಯಚೂರು: ಲಾರಿ, ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ ಗೋಲಪಲ್ಲಿ ಬಳಿ ನಡೆದಿದೆ.

ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ನಲ್ಲಿ ಮೇವು ತರಲು ಹೊರಟಿದ್ದ ಸಣ್ಣದುರುಗಪ್ಪ ಗೊಲ್ಲರ(35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿ ಬಳಿ ಜನಸಂದಣಿ ಉಂಟಾಗಿದ್ದು, ಸಂಚಾರ ಅಸ್ತವ್ಯಸ್ತಗೊಂಡಿತ್ತು.

RCR ACCIDENT AV 2

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *