ಹುಬ್ಬಳ್ಳಿ: ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಿದ ಲಾರಿ ಮುಷ್ಕರಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
Advertisement
ಹುಬ್ಬಳ್ಳಿಯ ಗಬ್ಬೂರ ಟೋಲ್ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಳೆ ಲಾರಿಗಳನ್ನು ಬಂದ್ ಮಾಡುವ ಕಾನೂನುನ್ನು ಹಿಂಪಡೆಯಬೇಕು. ಥರ್ಡ್ ಪಾರ್ಟಿ ಇನ್ಸೂರೆನ್ಸ್ ಕಡಿಮೆ ಮಾಡಬೇಕು. ಇ.ವೇ ಬಿಲ್ ಹಿಂಪಡೆಯಬೇಕು ಟೋಲ್ ದರವನ್ನು ಕಡಿಮೆ ಮಾಡಬೇಕು ಹಾಗೂ ಇತರೆ ಸಮಸ್ಯೆಗಳಾದ ಗ್ಯಾಸ್ ಡೀಸೆಲ್, ಪೆಟ್ರೋಲ್ ದರವನ್ನು ಜಿಎಸ್‍ಟಿಯಲ್ಲಿ ಒಳಪಡಿಸಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ರೈತರ ಕೃಷಿ ಕಾಯ್ದೆ, ವಿದ್ಯುತ್ ಕಾಯ್ದೆ ಎಪಿಎಂಸಿ ಹಿಂಪಡೆಯಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ಮಧ್ಯದಲ್ಲಿಯೇ ಪ್ರತಿಭಟನೆ ನಡೆಸಿದರು. ಇನ್ನೂ ರಸ್ತೆಯ ಮೇಲೆ ಸಂಚರಿಸುತ್ತಿರುವ ಲಾರಿಗಳನ್ನು ಬಂದ್ ಮಾಡಲು ಮುಂದಾದ ಕಾರ್ಯಕರ್ತರ ಮಧ್ಯದಲ್ಲಿಯೇ ಮಾತಿನ ಚಕಮಕಿ ನಡೆಯಿತು.