ವಿಜಯಪುರ: ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕ ಮಹಿಳೆ ಮೇಲೆ ಲಾರಿ ಹರಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ಲಕ್ಷ್ಮೀ ಬಿರಾದಾರ್ (45) ಮೃತ ಮಹಿಳೆ. ಈಕೆ ನಿಡಗುಂದಿ ತಾಲೂಕಿನ ಮುದ್ದಾಪೂರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ಪ್ರಾಣಬಿಟ್ಟಿದ್ದಾರೆ. ಇದನ್ನೂ ಓದಿ: ಕಳ್ಳತನ ಮಾಡಿ ಕ್ಷಮಿಸಿ ಎಂದು ಪತ್ರ ಬರೆದ ಕಳ್ಳ
ಹೆದ್ದಾರಿಯ ಎಡಬದಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿತ್ತು. ಲಕ್ಷ್ಮೀ ಕೆಲಸ ಮಾಡುತ್ತಿದ್ದಳು. ಆಗ ಲಾರಿ ಚಾಲಕ ನಿಯಂತ್ರಣ ತಪ್ಪಿ ಕಾಮಗಾರಿಯಲ್ಲಿ ತೊಡಗಿದ್ದ ಲಕ್ಷ್ಮಿ ಬಿರಾದಾರ್ ಮೇಲೆ ಹರಿದಿದೆ. ದುರಸ್ತಿ ನಡೆಯುತ್ತಿದ್ದ ರಸ್ತೆಯಲ್ಲಿ ಸೂಚನಾ ಫಲಕವನ್ನು ಇಡಲಾಗಿತ್ತು. ಸೂಚನಾ ಫಲಕಕ್ಕೆ ಗುದ್ದಿಸಿ ಬಳಿಕ ಮಹಿಳೆ ಮೇಲೆ ಲಾರಿ ಹರಿದಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.