ಲಿಂಗಾಯತರ ಧೀಮಂತ ನಾಯಕ ಬಿಎಸ್‍ವೈಯನ್ನು ಸಿಎಂ ಸ್ಥಾನದಿಂದ ಇಳಿಸಬೇಡಿ: ಎಂ.ಬಿ ಪಾಟೀಲ್

Public TV
2 Min Read
MB PATIL

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪದಚ್ಯುತಿಗೊಳಿಸಿದರೆ, ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ :  ಸಿಎಂ ಬದಲಾದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತದೆ: ರಂಭಾಪುರಿ ಶ್ರೀ

Maski BJP Campaign 1

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಿಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ :  ಮಂತ್ರಿ ಸ್ಥಾನ ಹೋದರೆ ಗೂಟ ಹೋದ ಹಾಗೆ: ಕೆ.ಎಸ್ ಈಶ್ವರಪ್ಪ

ರಾಜ್ಯದಲ್ಲಿ ಸಿಎಂ ಬದಲಾವಣೆಯ ಸುದ್ದಿ ಹಲವಾರು ದಿನಗಳಿಂದ ಹರಿದಾಡುತ್ತಿತ್ತು. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಕುರಿತಾಗಿ ಗಣ್ಯರು, ನಾಯಕರು ತಮ್ಮ ಅಭಿಪ್ರಾಯಗಳನ್ನು ಟ್ವೀಟ್ ಮಾಡುತ್ತಿದ್ದಾರೆ. ಇದನ್ನೂ ಓದಿ :  ಈಶ್ವರಪ್ಪ, ಜಗದೀಶ್ ಶೆಟ್ಟರ್ ಎರಡು ಕಣ್ಣುಗಳಿದ್ದಂತೆ: ನಳಿನ್ ಕುಮಾರ್ ಕಟೀಲ್

BSY medium

ಆಡಿಯೋದಲ್ಲಿ, ಯಾರಿಗೂ ಹೇಳಬೇಡ ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಅವರ ಟೀಮ್‍ನ್ನು ತೆಗೆಯುತ್ತೇವೆ. ಹೊಸ ತಂಡವನ್ನು ಕಟ್ಟುತ್ತೇವೆ. ಈಗ ಸದ್ಯಕ್ಕೆ ಯಾರಿಗೂ ಹೇಳಬೇಡ. ದೆಹಲಿಯಿಂದನೇ ಮಾಡುತ್ತಾರೆ. ಏನೂ ಸಮಸ್ಯೆ ಇಲ್ಲ, ಭಯಪಡಬೇಡ, ನಾವಿದ್ದೇವೆ. ಯಾರೇ ಆದ್ರೂ ಎಲ್ಲ ನಮ್ಮ ಕೈಯಲ್ಲೇ ಇರುತ್ತೆ. ಮೂರು ಹೆಸರು ಇದೆ, ಇದರಲ್ಲಿ ಯಾರಾದರೂ ಆಗುವ ಚಾನ್ಸ್ ಇದೆ ಎಂದು ಹೇಳಲಾಗಿದೆ. ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ ಎನ್ನಲಾದ ಆಡಿಯೋ ಇದು ಎಂದು ವೈರಲ್ ಆಗುತ್ತಿದ್ದು, ಆದರೆ ಇದು ನಕಲಿ ಆಡಿಯೋ ಎಂದು ಕಟೀಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆಗೆ ಕೂಡ ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *