ಹುಬ್ಬಳ್ಳಿ: ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಇಂಡಿಗೋ ವಿಮಾನದ ಟಯರ್ ಬ್ಲಾಸ್ಟ್ ಆದ ಘಟನೆ ಸೀಮವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.
ಸೋಮವಾರ ರಾತ್ರಿ ಕಣ್ಣೂರು- ಹುಬ್ಬಳ್ಳಿ ಬೆಂಗಳೂರು ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ವೇಳೆ ಚಕ್ರ ಬ್ಲಾಸ್ಟ್ ಆಗಿದೆ. ವಿಮಾನದ ಚಕ್ರ ಬ್ಲಾಸ್ಟ್ ಆದರೂ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
Advertisement
Advertisement
ನಿನ್ನೆ ಸಂಜೆ ಕಣ್ಣೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಈ ವಿಮಾನ, ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ 8:30ಕ್ಕೆ ಲ್ಯಾಂಡಿಂಗ್ ಆಗುವ ವೇಳೆ ರನ್ ವೇ ಯಿಂದ 300 ಮೀಟರ್ ದೂರ ಮುಂದೆ ಸಾಗಿ ಲ್ಯಾಂಡಿಂಗ್ ಆಗಿದೆ. ಈ ವೇಳೆ ಕ್ರಾಪ್ ವಿಂಡ್ ಪರಿಣಾಮದಿಂದ ವಿಮಾನದ ಮುಂದಿನ ಟಯರ್ ಬ್ಲಾಸ್ಟ್ ಆದ ಕೂಡಲೇ ಎಚ್ಚೆತ್ತ ಪೈಲಟ್ ಗಳು ವಿಮಾನವನ್ನುಸ ಮತ್ತೆ ಟೇಕಾಫ್ ಮಾಡಿ ಮತ್ತೊಮ್ಮೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.
Advertisement
ಕಣ್ಣೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ಈ ವಿಮಾನದಲ್ಲಿ 7 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಲ್ಲದೇ ವಿಮಾನದಲ್ಲಿ ಇಬ್ಬರು ಪೈಲೆಟ್ ಹಾಗೂ ಇಬ್ಬರು ಸಿಬ್ಬಂದಿ ಇದ್ದರು. ಇದನ್ನೂ ಓದಿ: ಇನ್ನೊಂದು ವಾರದಲ್ಲಿ ಮುನಿರತ್ನ ಮಂತ್ರಿಯಾಗಲಿದ್ದಾರೆ: ಸೋಮಣ್ಣ ಭವಿಷ್ಯ
Advertisement
ಇದೇ ವಿಮಾನದ ಮೂಲಕ ಹುಬ್ಬಳ್ಳಿಯಿಂದ 18 ಜನರು ಬೆಂಗಳೂರಿಗೆ ಪ್ರಯಾಣ ಮಾಡಬೇಕಾಗಿತ್ತು. ಟಯರ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ವಿಮಾನ ಪ್ರಯಾಣವನ್ನ ರದ್ದು ಮಾಡಲಾಗಿದ್ದು, ಕಣ್ಣೂರಿನಿಂದ ಬಂದ ಪ್ರಯಾಣಿಕರಿಗೆ ಖಾಸಗಿ ಹೊಟೇಲ್ ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.
ಇಂಡಿಗೋ ವಿಮಾನದ ಟಯರ್ ಬ್ಲಾಸ್ಟ್ ಆದ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ತಂಡ ಇಂದು ಪರಿಶೀಲನೆ ನಡೆಸಲಿದ್ದು. ಇಂಡಿಗೋ ವಿಮಾನಯಾನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿ ವಿಮಾನದ ಟೈಯರ್ ಬದಲಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.