ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಪಹರಣದ ರೂವಾರಿ ರೋಹಿತ್ ಬಂಧಿತ ಪ್ರಮುಖ ಆರೋಪಿ. ಈತ ಪ್ರಕರಣದ ಎ1 ಕವಿರಾಜ್ ಬಂಧನದ ವೇಳೆ ತಮಿಳುನಾಡಿನ ಹೊಸೂರಿನಿಂದ ತಪ್ಪಿಸಿಕೊಂಡಿದ್ದ. ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಂದ ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ನವೆಂಬರ್ 26 ರಂದು ಕೋಲಾರ ಬೆಗ್ಲಿಹೊಸಹಳ್ಳಿ ತೋಟದ ಮನೆಯ ಬಳಿಯಿಂದ ವರ್ತೂರ್ ಪ್ರಕಾಶ್ ಅವರನ್ನು ಕಿಡ್ನಾಪ್ ಮಾಡಲಾಗಿತ್ತು. ಡಿಸೆಂಬರ್-2 ರಂದು ಪ್ರಕರಣ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣ ಸಂಬಂಧ ಆರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಕೋಲಾರ ಪೊಲೀಸರು ಯಶಸ್ವಿಯಾಗಿದ್ದಾರೆ.