ವಲಸೆ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಸಚಿವ ಹೆಬ್ಬಾರ್

Public TV
1 Min Read
Shivaram Hebbar

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಡೈರಿ ಸರ್ಕಲ್ ಬಳಿಯಲ್ಲಿ ಮೆಟ್ರೋ ಹಾಗೂ ಇತರೆ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಲಸೆ ಕಾರ್ಮಿಕರಿಗೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ರಾಜ್ಯ ಕಟ್ಟಡದ ಕಾರ್ಮಿಕ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೀಡುತ್ತಿರುವ ದಿನಸಿ ಸಾಮಗ್ರಿಗಳ ಕಿಟ್ ಹಾಗೂ ಸುರಕ್ಷತಾ ಕಿಟ್ ಗಳನ್ನು ವಿತರಿಸಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು.

Shivaram Hebbar 2 medium

ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಲಸೆ ಕಾರ್ಮಿಕರ ಸುರಕ್ಷತೆಗಾಗಿ ಕೈಗೊಂಡ ಕ್ರಮಗಳ ಕುರಿತು ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಿ, ಪ್ರತಿಯೊಬ್ಬ ಕಾರ್ಮಿಕರೊಂದಿಗೆ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಿದರು. ಮಾನ್ಯ ಸಚಿವರು ಆಗಮಿಸಿ ಕಿಟ್ ನೀಡಿ ತಮ್ಮ ಸಮಸ್ಯೆಗಳನ್ನು ಆಲಿಸಿದಕ್ಕೆ ವಲಸೆ ಕಾರ್ಮಿಕರು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೊನ್ನಾವರ ಖಾಸಗಿ ಬಂದರು ವಿವಾದ, ಶೀಘ್ರ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ: ಹೆಬ್ಬಾರ್

Shivaram Hebbar 1 medium

ಈ ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಜಿ.ಕಲ್ಪನಾ ಹಾಗೂ ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ ಕಾರ್ಮಿಕ ಕಲ್ಯಾಣ ಮಂಡಳಿ ನಿರ್ದೇಶಕರಾದ ನಾಗನಾಥ್, ಪ್ರಕಾಶ್ ಎಂ, ನಾಡಗೇರ್ ಹಾಗೂ ಶಿವಾನಿ ಭಟ್ಕಳ ಮತ್ತು ಸ್ಥಳೀಯ ಕಾರ್ಮಿಕ ಸಂಘಟನೆಗಳ ಪ್ರಮುಖರು ಹಾಜರಿದ್ದರು.

Share This Article