ನವದೆಹಲಿ: ದೆಹಲಿಯಲ್ಲಿ ಲಾಕ್‍ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.
ಲಾಕ್‍ಡೌನ್ ಘೋಷಣೆಯಾಗುತ್ತಿದ್ದಂತೆ ಸಾವಿರಾರು ಮಂದಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೆಲಸವೂ ಇಲ್ಲದೇ, ದುಡಿಮೆಯಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಈ ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Advertisement
कोविड संकट को देखते हुए, मैंने पश्चिम बंगाल की अपनी सभी रैलियाँ रद्द करने का निर्णय लिया है।
राजनैतिक दलों को सोचना चाहिए कि ऐसे समय में इन रैलियों से जनता व देश को कितना ख़तरा है।
— Rahul Gandhi (@RahulGandhi) April 18, 2021
Advertisement
ಕೋವಿಡ್ ಸ್ಥಿತಿ ಭಯವನ್ನು ಹುಟ್ಟಿಸುತ್ತಿದೆ. ಸೂಕ್ತ ಸಮಯದಲ್ಲಿ ಲಾಕ್‍ಡೌನ್‍ನಂತಹ ನಿಯಮಗಳನ್ನು ತೆಗೆದುಕೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗುತ್ತಿದೆ. ವಲಸೆ ಕಾರ್ಮಿಕರು ಮತ್ತೆ ನಗರಗಳನ್ನು ಬಿಟ್ಟು ತಮ್ಮೂರಿನತ್ತ ಹೊರಟಿದ್ದಾರೆ. ಇದು ನಿಮ್ಮ ಯೋಜನೆಯಾ? ಬಡವರು, ಕಾರ್ಮಿಕರು ಮತ್ತು ಬೀದಿಬದಿಯ ವ್ಯಾಪಾರಿಗಳಿಗೆ ಆರ್ಥಿಕ ನೆರವು ಬೇಕಾಗಿದೆ. ದಯವಿಟ್ಟು ಅವರಿಗೆ ನೆರವಾಗಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
कोविड की भयावहता देखकर ये तो स्पष्ट था कि सरकार को लॉकडाउन जैसे कड़े कदम उठाने पड़ेंगे लेकिन प्रवासी श्रमिकों को एक बार फिर उनके हाल पर छोड़ दिया। क्या यही आपकी योजना है?
नीतियां ऐसी हों जो सबका ख्याल रखें। गरीबों, श्रमिकों, रेहड़ी वालों को नकद मदद वक्त की मांग है। कृपया ये करिए pic.twitter.com/GtvWKF6mAT
— Priyanka Gandhi Vadra (@priyankagandhi) April 20, 2021
Advertisement
ದೆಹಲಿಯಲ್ಲಿ ನಿನ್ನೆ ರಾತ್ರಿ 10 ಗಂಟೆಗೆ ಪ್ರಾರಂಭವಾದ ಲಾಕ್‍ಡೌನ್ ಏಪ್ರಿಲ್ 26ರ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಇರಲಿದೆ. ಅಗತ್ಯ ಸೇವೆಗಳಿಗೆ ಮಾತ್ರ ಅನುವು ಮಾಡಿಕೊಡಲಾಗಿದೆ. ಆದರೆ ಜನರು ಭಯಗೊಂಡು ತಮ್ಮ ಊರುಗಳಿಗೆ ಪ್ರಯಾಣ ಮಾಡಿದ್ದಾರೆ.