– ಭದ್ರತಾ ಸಿಬ್ಬಂದಿಯಂತೆ ಬಟ್ಟೆ ಧರಿಸಿದ ಖದೀಮರು
ಲಾಗೋಸ್: ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರ ಅಪಹರಣ ಮಾಡಿರುವ ಘಟನೆ ನೈಜಿರೀಯಾದಲ್ಲಿ ನಡೆದಿದೆ.
ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ.
Advertisement
Advertisement
ನನ್ನ 10 ಮತ್ತು 13 ವರ್ಷದ ಮಕ್ಕಳಿಬ್ಬರನ್ನೂ ಅಪಹರಿಸಲಾಗಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂಬುದು ನಿರಾಶಾದಾಯಕವಾಗಿದೆ ಎಂದು ಪೋಷಕರೊಬ್ಬರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ. ಬಾಲಕಿಯರನ್ನು ಅಪಹರಿಸಿ ಕಾಡಿಗೆ ಕರೆದೊಯ್ದಿದ್ದಾರೆ. ಬಾಲಕಿಯರನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಡುವುದೇ ಅವರ ಟಾರ್ಗೆಟ್, ನಮಗೆ ಮಕ್ಕಳನ್ನು ಸುರಕ್ಷಿತವಾಗಿ ವಾಪಸ್ ಕರೆ ತರುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
Advertisement
Advertisement
ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಅವರ ಪೋಷಕರ ಬಳಿ ತಲುಪಿಸುವುದು ನಮ್ಮ ಮೂಲ ಉದ್ದೇಶವಾಗಿದೆ. ಹಣಕ್ಕಾಗಿ ಮುಗ್ಧ ಶಾಲಾ ಮಕ್ಕಳನ್ನು ಅಪಹರಿಸಿ, ಬೆದರಿಕೆಯೊಡ್ಡುವ ಬಂಡಕೋರರಿಗೆ ನಾವು ಹೆದರುವುದಿಲ್ಲ ಎಂದು ನೈಜೀರಿಯಾದ ಅಧ್ಯಕ್ಷ ಮೊಹಮ್ಮದ್ ಬುಹಾರಿ ಹೇಳಿದ್ದಾರೆ.
ಸರ್ಕಾರಿ ಭದ್ರತಾ ಸಿಬ್ಬಂದಿಯಂತೆ ಬಟ್ಟೆ ಧರಿಸಿ ಖದೀಮರು ವಾಹನದಲ್ಲಿ ಕುಳಿತುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಒತ್ತಡ ಹಾಕಿದ್ದಾರೆ. ಪೋಷಕರಿಗೆ ತಿಳಿದ ಬಳಿಕ ಅವರು ಶಾಲೆಗಳನ್ನು ಸುತ್ತುವರಿದಿದ್ದಾರೆ. ಆದರೆ ಅದಾಗಲೇ ಬಾಲಕಿಯರನ್ನು ಅಪಹರಿಸಿ ಕರೆದೊಯ್ಯಲಾಗಿತ್ತು ಎಂದು ತಿಳಿದುಬಂದಿದೆ.