ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ನಗರದ ಎಸ್ .ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ವಾಟಾಳ್ ನಾಗರಾಜ್ ರಾಜ್ಯ ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆ ಟೌನ್ ಹಾಲ್ ಮುಂದೆ ಡಿಸೆಂಬರ್ 5 ರಂದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ವೇಳೆ ಕೋವಿಡ್19 ಮಾರ್ಗಸೂಚಿ ಉಲ್ಲಂಘನೆ ಆರೋಪದಡಿ ದೂರು ದಾಖಲಾಗಿತ್ತು. ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ-2020 ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
Advertisement
Advertisement
ವಾಟಾಳ್ ನಾಗರಾಜ್ ಗೆ ನ್ಯಾಯಾಲಯ 50 ಸಾವಿರ ದಂಡ ಪಾವತಿಸುವಂತೆ ಆದೇಶಿಸಿತ್ತು. ದಂಡ ಕಟ್ಟುವಂತೆ ವಾಟಾಳ್ ನಾಗರಾಜ್ ಗೆ ಡಿಸೆಂಬರ್ 19 ರಂದು ಎಸ್.ಜೆ ಪಾರ್ಕ್ ಪೊಲೀಸ್ರು ಇದೇ ತಿಂಗಳ 21 ರ ಒಳಗಾಗಿ ದಂಡದ ಮೊತ್ತ ಪಾವತಿಸುವಂತೆ ಸೂಚಿಸಿ ನೋಟಿಸ್ ನೀಡಿದ್ರು. ಆದರೆ ಅವಧಿಯೊಳಗಡೆ ವಾಟಾಳ್ ನಾಗರಾಜ್ ದಂಡದ ಮೊತ್ತ ಪಾವತಿಸದ ಹಿನ್ನೆಲೆಯಲ್ಲಿ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.