ಶಿವಮೊಗ್ಗ: ಕಳೆದ ಒಂದು ವಾರದ ಹಿಂದೆ ಯುವತಿಯೊಬ್ಬಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಯುವಕನೊಬ್ಬನ ಬರ್ಬರ ಹತ್ಯೆ ನಡೆದಿದೆ.
ಟಿಪ್ಪುನಗರದ ಕಾರ್ತಿಕ್ (26) ಕೊಲೆಯಾದ ಯುವಕ. ಈತನನ್ನು ಶಿವಮೊಗ್ಗದ ಹರಿಗೆ ಸಮೀಪ ಕೆಇಬಿ ಕ್ವಾಟ್ರಸ್ ಹಿಂಭಾಗದಲ್ಲಿ ಕೊಲೆ ಮಾಡಲಾಗಿದೆ. ಶಿವಮೊಗ್ಗದ ವಿದ್ಯಾನಗರದ ಅಮೂಲ್ಯ (22) ಕಳೆದ ಒಂದು ವಾರದ ಹಿಂದೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.
ಸದ್ಯ ಕೊಲೆಯಾದ ಯುವಕ ಹಾಗೂ ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು ಎನ್ನಲಾಗಿದೆ. ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಯುವತಿ ಕಡೆಯವರೇ ಯುವಕನನ್ನು ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಯುವತಿಯ ಸಹೋದರ ಸೇರಿದಂತೆ 7 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.