ಮಡಿಕೇರಿ: ಕೊಡಗಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ಲಾಕ್‍ಡೌನ್ ಮಾಡಿದೆ. ಲಾಕ್‍ಡೌನ್‍ಗೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ದೊರೆತಿದೆ.
ವಾರಾಂತ್ಯದಂದು ಕೊಡಗಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ಅಂತರ್ ಜಿಲ್ಲೆಯ ಜನರು ಅಗಮಿಸುತ್ತಿದ್ರು. ಇದರಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಲಾಕ್‍ಡೌನ್ ಮಾಡಿದ್ದು, ಜಿಲ್ಲೆಯ ಜನರು ಜಿಲ್ಲಾಡಳಿತದ ಈ ಕ್ರಮಕ್ಕೆ ಬೆಂಬಲ ಸೂಚಿಸಿದ್ದಾರೆ.
Advertisement
Advertisement
ಮಂಜಿನ ನಗರಿ ಮಡಿಕೇರಿಯಲ್ಲಿ ಜನ, ವಾಹನ ಸಂಚಾರ ಇಲ್ಲ. ರಸ್ತೆಗಳು ಬಿಕೋ ಎನ್ನುತ್ತಿದೆ. ಕುಶಾಲನಗರ ಗಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ. ಜಿಲ್ಲೆಯ ಸಿದ್ದಾಪುರ, ಗೋಣಿಕೊಪ್ಪ, ವೀರಾಜಪೇಟೆ, ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ, ಸುಂಟಿಕೊಪ್ಪಗಳಲ್ಲಿಯೂ ಸಂಪೂರ್ಣವಾಗಿ ಲಾಕ್‍ಡೌನ್ ಆಗಿದೆ.
Advertisement
ಜನ, ವಾಹನ ಸಂಚಾರ ಇಲ್ಲದೆ ಗ್ರಾಮೀಣ ಭಾಗಗಳಲ್ಲಿಯೂ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದೆ. ಬಸ್, ಆಟೋ ಸಂಚಾರವೂ ಸ್ಥಗಿತವಾಗಿರುವುದರಿಂದ ರಸ್ತೆಗಳು ಬಿಕೋ ಎನ್ನುತ್ತಿದೆ.
Advertisement
ಒಟ್ಟಾರೆ ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ವ್ಯಾಪಿಸದಂತೆ ಜಿಲ್ಲಾಡಳಿತದಿಂದ ಜುಲೈ ಅಂತ್ಯದವರೆಗೆ ವಾರಾಂತ್ಯದಂದು ಲಾಕ್‍ಡೌನ್ ಘೋಷಣೆ ಮಾಡಿರುವುದರಿಂದ ಜಿಲ್ಲಾಡಳಿತ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.