ಬೆಂಗಳೂರು: ಕೋವಿಡ್ 19 ಸಮಯದಲ್ಲಿ ಗರ್ಭಿಣಿಯರಿಗೆ ಹೆರಿಗೆ ಮಾಡುವುದು ಬಹಳ ಕಷ್ಟ. ಇಂತ ಕಷ್ಟದ ಸಮಯದಲ್ಲೂ ಬೆಂಗಳೂರಿನ ವಿಕ್ಠೋರಿಯಾ ಆಸ್ಪತ್ರೆ 100 ಮಂದಿ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿದೆ.
ಈ ವಿಚಾರದ ಬಗ್ಗೆ ಮಾಹಿತಿ ತಿಳಿಸಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.
ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ತೊಡಗಿರುವ ವಿಕ್ಟೊರಿಯಾ ಆಸ್ಪತ್ರೆ ಈ ಸಂದರ್ಭದಲ್ಲಿ 100ನೇ ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಗೆ ಯಶಸ್ವಿಯಾಗಿ ಹೆರಿಗೆ ಪೂರೈಸುವ ಮೂಲಕ ಇನ್ನೊಂದು ವಿಶೇಷ ಮೈಲಿಗಲ್ಲು ಸಾಧಿಸಿದೆ. ಇದಕ್ಕೆ ಶ್ರಮಿಸಿದ ವಿಕ್ಟೊರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗೆ ನನ್ನ ಅಭಿನಂದನೆಗಳು. pic.twitter.com/bEjJlf8LDQ
— Dr Sudhakar K (@mla_sudhakar) July 17, 2020
ಇನ್ನೊಂದು ಟ್ವೀಟ್‌ನಲ್ಲಿ ಮಕ್ಕಳಿಗೆ ಸೋಂಕು ತಗಲದಂತೆ ಎಚ್ಚರ ವಹಿಸಿ ಈವರೆಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಸುಮಾರು 350 ಕೋವಿಡ್ ಸೋಂಕಿತ ಗರ್ಭಿಣಿಯರಿಗೆ ವಿಕ್ಟೊರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲಾ ನವಜಾತ ಶಿಶುಗಳಿಗೂ ಕೋವಿಡ್ ನೆಗಟಿವ್ ಬಂದಿದ್ದು ತಾಯಂದಿರು- ಶಿಶುಗಳು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಮಕ್ಕಳಿಗೆ ಸೋಂಕು ತಗಲದಂತೆ ಎಚ್ಚರ ವಹಿಸಿ ಈವರೆಗೂ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಸುಮಾರು 350 ಕೋವಿಡ್ ಸೋಂಕಿತ ಗರ್ಭಿಣಿ ಮಹಿಳೆಯರಿಗೆ ವಿಕ್ಟೊರಿಯಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಪ್ರಕರಣಗಳನ್ನು ಹೊರತುಪಡಿಸಿ ಎಲ್ಲಾ ನವಜಾತ ಶಿಶುಗಳಿಗೂ ಕೋವಿಡ್ ನೆಗಟಿವ್ ಬಂದಿದ್ದು ತಾಯಂದಿರು- ಶಿಶುಗಳು ಆರೋಗ್ಯವಾಗಿದ್ದರೆ. pic.twitter.com/bumZpf70mi
— Dr Sudhakar K (@mla_sudhakar) July 17, 2020
ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ ಪೈಕಿ ಸ್ಥಾನ ಪಡೆದಿದೆ. ಈವರೆಗೂ ರಾಜ್ಯದಲ್ಲಿ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದ್ದು ಅವೆಲ್ಲವೂ ನಿಖರ ವರದಿ ನೀಡುವ ಆರ್‌ಟಿ -ಪಿಸಿಆರ್ ಪರೀಕ್ಷೆ ಆಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
.@WHO ಪ್ರತಿ ದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ ಪೈಕಿ ಸ್ಥಾನ ಪಡೆದಿದೆ. ಈವರೆಗೂ ರಾಜ್ಯದಲ್ಲಿ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದ್ದು ಅವೆಲ್ಲವೂ ನಿಖರ ವರದಿ ನೀಡುವ RT-PCR ಟೆಸ್ಟ್ ಆಗಿವೆ.
— Dr Sudhakar K (@mla_sudhakar) July 17, 2020